ADVERTISEMENT

ಕಾರ ಹುಣ್ಣಿಮೆ: ಚಂದ್ರಗುತ್ತಿಯಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:06 IST
Last Updated 11 ಜೂನ್ 2025, 13:06 IST
ಕಾರ ಹುಣ್ಣಿಮೆ ಪ್ರಯುಕ್ತ ಸೊರಬ ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು
ಕಾರ ಹುಣ್ಣಿಮೆ ಪ್ರಯುಕ್ತ ಸೊರಬ ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು   

ಸೊರಬ: ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ಕಾರ ಹುಣ್ಣಿಮೆ (ವಟ ಸಾವಿತ್ರಿ) ಪ್ರಯುಕ್ತ ಸಾವಿರಾರು ಭಕ್ತರು ಬುಧವಾರ ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ತಾಲ್ಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೆಬೆನ್ನೂರು, ಶಿಕಾರಿಪುರ, ಹಾವೇರಿ, ಹಾನಗಲ್, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ಅನೇಕ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಆರಾಧ್ಯ ದೇವಿ ರೇಣುಕಮ್ಮನ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ, ತ್ರಿಶೂಲ ಭೈರಪ್ಪ ಹಾಗೂ ತೊಟ್ಟಿ ಬಾವಿಗೆ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು‌. ‌

ಧಾರ್ಮಿಕ ಪೂಜಾ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಕಿವಿ ಚುಚ್ಚಿಸುವುದು ಸೇರಿ ವಿವಿಧ ಸೇವೆಯನ್ನು ನಡೆಸಲಾಯಿತು. ಜನ ಹಾಗೂ ವಾಹನಗಳ ದಟ್ಟಣೆಯಿಂದ ಮುಖ್ಯ ರಸ್ತೆಯಲ್ಲಿ ಕೆಲ ಸಮಯ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.