ADVERTISEMENT

ದಸರಾ ಪ್ರಯುಕ್ತ: ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು ಸಂಚಾರ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 5:14 IST
Last Updated 16 ಸೆಪ್ಟೆಂಬರ್ 2025, 5:14 IST
<div class="paragraphs"><p>ತಾಳಗುಪ್ಪ</p></div>

ತಾಳಗುಪ್ಪ

   

ಶಿವಮೊಗ್ಗ: ‘ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ಹೆಚ್ಚುವರಿ ಒಂದು ವಿಶೇಷ ರೈಲು ಗಾಡಿ ಮೂರು ಬಾರಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌.

ವಿಶೇಷ ರೈಲಿನ ಸಮಯ: ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ನಡುವೆ ಸೆ.19, 26 ಮತ್ತು ಅ.3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ನಡುವೆ ಸೆ. 20, 27 ಮತ್ತು ಅ. 4ರಂದು ತಾಳಗುಪ್ಪದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ನಿಲುಗಡೆ:  ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಬೋಗಿಗಳು:  ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ 1 ಎಸಿ ಟು-ಟಯರ್, 2 ಎಸಿ ತ್ರೀ-ಟಯರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ದ್ವಿತೀಯ ದರ್ಜೆ ಲಗೇಜ್-ಕಂ-ಬ್ರೇಕ್ ವ್ಯಾನ್‌ಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.