ADVERTISEMENT

ಕೆಎಫ್‍ಡಿ ರೋಗಕ್ಕೆ ಔಷಧ ಕಂಡು ಹಿಡಿಯಲು ಉನ್ನತ ಮಟ್ಟದ ಸಭೆ: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 2 ಮೇ 2020, 13:34 IST
Last Updated 2 ಮೇ 2020, 13:34 IST
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು   

ಶಿವಮೊಗ್ಗ:ಜಿಲ್ಲೆಯ ತಾಲೂಕುಗಳನ್ನು ಕಾಡುತ್ತಿರುವ ಕೆಎಫ್‍ಡಿ ಸಮರ್ಪಕ ನಿಯಂತ್ರಣಕ್ಕಾಗಿ ವಿಶೇಷ ಸಭೆಯನ್ನು ಕರೆದು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ತಿಳಿಸಿದರು.

ಕೆಎಫ್‍ಡಿ ಹಾವಳಿ ಕುರಿತು ಜಿಲ್ಲೆಯ ಶಾಸಕರು ವಿಧಾನಸಭೆಯಲ್ಲೇ ಸಮಗ್ರ ಮಾಹಿತಿ ನೀಡಿದ್ದಾರೆ. ಕೆಎಫ್‍ಡಿಗೆ ಸೂಕ್ತ ಔಷಧ ಕಂಡು ಹಿಡಿಯುವುದು ಸೇರಿದಂತೆ ನಿಯಂತ್ರಣಕ್ಕೆ ಪೂರಕ ಸಂಶೋಧನೆಗಳ ಕುರಿತು ಸಮಾಲೋಚನೆ ನಡೆಸಲು ಉನ್ನತ ಮಟ್ಟದ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ ವರ್ಷ 168 ಕೆಎಫ್‍ಡಿ ಪ್ರಕರಣಗಳು ವರದಿಯಾಗಿವೆ. ತೀರ್ಥಹಳ್ಳಿಯಲ್ಲಿ 132 ಹಾಗೂ ಸಾಗರದಲ್ಲಿ 36 ಪ್ರಕರಣ ವರದಿಯಾಗಿದೆ. ಪ್ರಸ್ತುತ 12ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ 5 ಸಾವಿರ ರಕ್ತ ಪರಿಶೋಧನೆ ನಡೆಸಲಾಗಿದೆ. ಎರಡು ಮಂಗಳಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.