ADVERTISEMENT

ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರಕ್ಷತೆಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 14:40 IST
Last Updated 23 ಜೂನ್ 2020, 14:40 IST
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರೌಢ ಶಾಲೆಯ ಹೊರಗೂ ಅಂತರ ಕಾಪಾಡಲು ಹಾಕಿರುವ ಗುರುತು. 
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರೌಢ ಶಾಲೆಯ ಹೊರಗೂ ಅಂತರ ಕಾಪಾಡಲು ಹಾಕಿರುವ ಗುರುತು.    

ಶಿವಮೊಗ್ಗ: ಜಿಲ್ಲೆಯ84 ಪರೀಕ್ಷಾ ಕೇಂದ್ರಗಳಲ್ಲಿ ಜೂನ್‌ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳುಸುರಕ್ಷಿತವಾಗಿಪರೀಕ್ಷೆ ಬರೆಯಲು ಎಲ್ಲ ಕೇಂದ್ರಗಳಲ್ಲೂ ಅಗತ್ಯ ಮಂಜಾಗ್ರತೆ ಕೈಗೊಳ್ಳಲಾಗಿದೆ.

ಜಿಲ್ಲೆಯ ಏಳೂ ತಾಲ್ಲೂಕುಗಳ24,904 ವಿದ್ಯಾರ್ಥಿಗಳು, ಎರಡುಕೇಂದ್ರಗಳಲ್ಲಿ 610 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಭದ್ರಾವತಿ ತಾಲ್ಲೂಕಿನ 4,607, ಹೊಸನಗರ 1,629, ಸಾಗರ2,878, ಶಿಕಾರಿಪುರ 3,697, ಶಿವಮೊಗ್ಗ 7,164, ಸೊರಬ 2,578 ಹಾಗೂ ತೀರ್ಥಹಳ್ಳಿ ತಾಲ್ಲೂಕಿನಲ್ಲಿ1,690 ವಿದ್ಯಾರ್ಥಿಗಳು ಇದ್ದಾರೆ.84 ಪರೀಕ್ಷಾ ಕೇಂದ್ರಗಳಲ್ಲಿ 1,252 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.ವಿಶೇಷ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೊಠಡಿಗೆ ಗರಿಷ್ಠ 20 ವಿದ್ಯಾರ್ಥಿಗಳಿಗೆಅವಕಾಶ ಕಲ್ಪಿಸಲಾಗಿದೆ ಎಂದರು.

ADVERTISEMENT

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆತರಲು 142 ಖಾಸಗಿ ಬಸ್, 56 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ನಿತ್ಯವೂ ನಿಗದಿತ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ, ಉಚಿತವಾಗಿ ಪ್ರಯಾಣಿಸುವ ಅವಕಾಶಕಲ್ಪಿಸಲಾಗಿದೆ. ಪರೀಕ್ಷಾ ಸಮಯದಲ್ಲಿಹಾಸ್ಟೆಲ್ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ 144 ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.ಕೇಂದ್ರಗಳ ಸುತ್ತಾ ಇರುವ ಎಲ್ಲಾ ಜೆರಾಕ್ಸ್ ಮತ್ತು ಸೈಬರ್ ಸೇವಾ ಕೇಂದ್ರಗಳನ್ನು ಮುಚ್ಚಲು ಸೂಚಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲೂವಿದ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಬೆಳಗ್ಗೆ 8.30ರ ಒಳಗೆ ಪರೀಕ್ಷಾ ಕೊಠಡಿಒಳಗೆಹಾಜರಿರಬೇಕು. 10ರವರೆಗೂ ಕೊಠಡಿಯಲ್ಲಿ ಅಭ್ಯಾಸ ಮಾಡಬಹುದು. ನಂತರ ಬ್ಯಾಗನ್ನು ಕೊಠಡಿ ಹೊರಭಾಗದಲ್ಲಿಇಟ್ಟು ಪರೀಕ್ಷೆ ಬರೆಯಬೇಕು. ಮೊಬೈಲ್ ಮತ್ತು ವಿದ್ಯುದ್ಮಾನ ಉಪಕರಣಗಳನ್ನು ಕೊಠಿ ಒಳಗೆ ನಿಷೇಧಿಸಲಾಗಿದೆ. ಬೇಸಿಕ್ ವಾಚ್‍ ತರಲು ಅವಕಾಶನೀಡಲಾಗಿದೆ.

ಎಲ್ಲ ಕೇಂದ್ರಗಳನ್ನೂಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪ್ರತಿ ದಿನ ಪರೀಕ್ಷೆ ಮುಗಿದ ಮೇಲೆ ಮತ್ತೆ ರಸಾಯನಿಕಗಳಿಂದಸ್ವಚ್ಛಗೊಳಿಸಲಾಗುವುದು.ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಮಕ್ಕಳುಪರಸ್ಪರ ಅಂತರ ಕಾಪಾಡಿಕೊಳ್ಳಲು,ಮಾಸ್ಕ್‌ ಧರಿಸುವಂತೆ ಸಲಹೆ ನೀಡಲಾಗಿದೆ.

ನಿಗದಿತ ಸಮಯಕ್ಕೆ ಬಸ್‌ಗಗಳು ಸಂಚರಿಸಲಿವೆ.ಬಂದ ಬಸ್‌ಗಳಲ್ಲೇ ವಾಪಸ್‌ ಮರಳಬೇಕು. ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳಿಗೆ ಪ್ರತಿ ತಾಲ್ಲೂಕುಕೇಂದ್ರದ ಬಸ್‍ನಿಲ್ದಾಣದಿಂದ ಜಿಲ್ಲಾ ಕೇಂದ್ರಕ್ಕೆಬಸ್ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.