ಹೊಸನಗರ ಪಟ್ಟಣದ ಬೀದಿಬದಿ ವ್ಯಾಪರಿಗಳು ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು
ಹೊಸನಗರ: ಸೂಕ್ತ ಜಾಗವಿಲ್ಲದೇ ವ್ಯಾಪಾರ ನಡೆಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಜಾಗ ಗುರುತಿಸಿಕೊಡಿ ಎಂದು ಬೀದಿ ಬದಿ ವ್ಯಾಪಾರಿಗಳು ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ಹೆದ್ದಾರಿ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಸಿಕೊಂಡು ಬದುಕು ಕಟ್ಟಿಕೊಂಡಿದ್ದೇವೆ. ಆದರೆ ಹೆದ್ದಾರಿ ಬದಿಯಲ್ಲಿದ್ದ ನಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದು, ಬದುಕು ಬೀದಿಗೆ ಬಂದಿದೆ. ಕೂಡಲೇ ಸೂಕ್ತ ಜಾಗ ಗುರುತಿಸಿಕೊಡಿ ಎಂದು ವ್ಯಾಪಾರಿಗಳು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಶಾಸಕರು, ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರವೇ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ವ್ಯಾಪಾರಿಗಳಾದ ಚಂದ್ರಶೇಖರ್, ಗಣಪತಿ, ಲಕ್ಷ್ಮಣ್, ಶಾಲಿನಿ, ಅವಿನಾಶ್, ಗೋವಿಂದಣ್ಣ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.