ADVERTISEMENT

ಹೊಳೆಹೊನ್ನೂರು | ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮುಖ್ಯ: ನಂದಿನಿ ವೈ.ಬಿ.

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:55 IST
Last Updated 29 ಡಿಸೆಂಬರ್ 2025, 6:55 IST
ಹೊಳೆಹೊನ್ನೂರಿನ ವಿವೇಕಾನಂದ ಲಯನ್ಸ್ ವಿದ್ಯಾವರ್ಧಕ ಟ್ರಸ್ಟ್ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಾಷಿಕೋತ್ಸವ ಕಾರ್ಯಕ್ರಮದಲ್ಲಿ ನಿರೂಪಕಿ ನಂದಿನಿ ವೈ.ಬಿ ಅವರನ್ನು ಸನ್ಮಾನಿಸಲಾಯಿತು
ಹೊಳೆಹೊನ್ನೂರಿನ ವಿವೇಕಾನಂದ ಲಯನ್ಸ್ ವಿದ್ಯಾವರ್ಧಕ ಟ್ರಸ್ಟ್ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಾಷಿಕೋತ್ಸವ ಕಾರ್ಯಕ್ರಮದಲ್ಲಿ ನಿರೂಪಕಿ ನಂದಿನಿ ವೈ.ಬಿ ಅವರನ್ನು ಸನ್ಮಾನಿಸಲಾಯಿತು   

ಹೊಳೆಹೊನ್ನೂರು: ಭವಿಷ್ಯದ ದೃಷ್ಠಿಯಿಂದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರದಲ್ಲೂ ತೊಡಗಿಸಿಕೊಂಡರೆ ಮುಂದೆ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಭದ್ರಾವತಿ ಆಕಾಶವಾಣಿಯ ನಿರೂಪಕಿ ನಂದಿನಿ ವೈ.ಬಿ. ತಿಳಿಸಿದರು.

ಪಟ್ಟಣದ ವಿವೇಕಾನಂದ ಲಯನ್ಸ್ ವಿದ್ಯಾವರ್ಧಕ ಟ್ರಸ್ಟ್ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೂರು ದಶಕಗಳ ಕಾಲ ಒಂದು ಸಂಸ್ಥೆಯನ್ನು ನಿರ್ವಹಣೆ ಮಾಡುವುದು ಅಷ್ಟು ಸುಲಭದ ಮಾತಲ್ಲ. ಇಂದಿನ ದಿನಗಳಲ್ಲಿ ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದರು.

ADVERTISEMENT

ಶಾಲೆಯಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳ ಆಸಕ್ತಿಗಳನ್ನು ಅರಿತು ಸರಿಯಾದ ಮಾರ್ಗದರ್ಶನ ನೀಡಬೇಕು. ಮೊಬೈಲ್ ನಿಂದ ಆದಷ್ಟು ಅಂತರ ಕಾಯ್ದುಕೊಳ್ಳುವಂತೆ ಮಾಡಬೇಕು. ಭಾರತ ಕಲೆ, ಶಿಲ್ಪಕಲೆ, ವಾಸ್ತು ಶಿಲ್ಪ, ರಾಮಾಯಣ, ಮಹಾಭಾರತದಂತಹ ಉನ್ನತವಾದ ಸಂಸ್ಕೃತಿಯನ್ನು ಹೊಂದಿದ ದೇಶವಾಗಿದೆ. ಶಾಲೆಗಳಲ್ಲಿ ಸಂಸ್ಕೃತಿ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ವಹಿಸಿಸಬೇಕಾಗಿದೆ ಎಂದು ತಿಳಿಸಿದರು.

ವಿವೇಕಾನಂದ ಲಯನ್ಸ್ ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷ ಜಿ.ಆರ್. ಸೀತಾರಾಮ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಚ್.ಸಿ. ರಾಜೇಶ್, ಖಜಾಂಚಿ ಎನ್. ರಮೇಶ್, ಟ್ರಸ್ಟ್ ಕಾರ್ಯದರ್ಶಿ ದ್ಯಾಮಪ್ಪ, ಖಜಾಂಚಿ ಯು.ವಿಜಯಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಇ.ರೇಣುಕಾ, ಎನ್.ಎಸ್.ಸೋಮಶೇಖರಪ್ಪ, ಆರ್.ಆಶಾ, ದಾನೇಶಯ್ಯ, ದೀಪಾ ಚಂದ್ರು, ಮುಖ್ಯಶಿಕ್ಷಕ ಎಚ್.ಸುರೇಶ್, ಎಸ್.ಕಲ್ಯಾಣಪ್ಪ, ರಾಬಿಯಾ ಬೀ ಹಾಜರಿದ್ದರು.