ADVERTISEMENT

ಹದಗೆಟ್ಟ ರಸ್ತೆ ಬಗ್ಗೆ ಪ್ರಧಾನಿಗೆ ಪತ್ರ: ದುರಸ್ತಿಗೊಳಿಸಲು ಸೂಚಿಸಿದ ಕಾರ್ಯಾಲಯ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 13:00 IST
Last Updated 8 ಸೆಪ್ಟೆಂಬರ್ 2019, 13:00 IST
ವರ್ಷಿಣಿ ಆರ್.ವೈದ್ಯ
ವರ್ಷಿಣಿ ಆರ್.ವೈದ್ಯ   

ತೀರ್ಥಹಳ್ಳಿ: ಮಲೆನಾಡಿನ ಗ್ರಾಮೀಣ ಭಾಗದ ರಸ್ತೆ ದುರಸ್ತಿ ಮಾಡುವಂತೆ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಣಿಮಕ್ಕಿ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವರ್ಷಿಣಿ ಆರ್. ವೈದ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ.

ತಾಲ್ಲೂಕಿನ ಮಂಡಗದ್ದೆ ಹೋಬಳಿ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಣಿಮಕ್ಕಿ ಗ್ರಾಮದಿಂದ ಮಹಿಷಿ ವರೆಗಿನ 4 ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಈ ಬಗ್ಗೆ ಪ್ರಧಾನಿಗೆ ಬರೆದ ಪತ್ರದಲ್ಲಿ ಮಲೆನಾಡಿನ ಗ್ರಾಮೀಣ ಭಾಗದ ರಸ್ತೆಗಳ ಈಗಿನ ಸ್ಥಿತಿಯನ್ನು ವರ್ಷಿಣಿ ವಿವರಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ನೀಡುವ ಭರವಸೆ ಸುಳ್ಳಾಗಿದ್ದು, ವಿದ್ಯಾರ್ಥಿಗಳ, ಸಾರ್ವಜನಿಕರ ಸುಗಮ ಸಂಚಾರಕ್ಕೆ ರಸ್ತೆ ಸರಿಪಡಿಸುವಂತೆ ಮನವಿ ಮಾಡಿದ್ದರು.

ADVERTISEMENT

ಪ್ರಧಾನಿಗೆ ಬರೆದ ಪತ್ರಕ್ಕೆ ಸ್ಪಂದನೆ ದೊರೆತಿದ್ದು, ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ಶೀಘ್ರ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಾರ್ಯಾಲಯ ಸೂಚಿಸಿದೆ.

ಇವನ್ನೂಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.