ADVERTISEMENT

ಸರ್ಜಿ ಆಸ್ಪತ್ರೆ: ಮಕ್ಕಳಿಗೆ ಟೈಫಾಯಿಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 3:54 IST
Last Updated 14 ಆಗಸ್ಟ್ 2022, 3:54 IST
ಶಿವಮೊಗ್ಗದ ದುರ್ಗಿ ಗುಡಿ ಸರ್ಕಾರಿ ಶಾಲೆಯಲ್ಲಿ ಶನಿವಾರ ಸರ್ಜಿ ಫೌಂಡೇಷನ್ ಆಶ್ರಯದಲ್ಲಿ ಮಕ್ಕಳಿಗೆ ಉಚಿತವಾಗಿ ಟೈಪಾಯಿಡ್ ಲಸಿಕೆ ಹಾಕಲಾಯಿತು
ಶಿವಮೊಗ್ಗದ ದುರ್ಗಿ ಗುಡಿ ಸರ್ಕಾರಿ ಶಾಲೆಯಲ್ಲಿ ಶನಿವಾರ ಸರ್ಜಿ ಫೌಂಡೇಷನ್ ಆಶ್ರಯದಲ್ಲಿ ಮಕ್ಕಳಿಗೆ ಉಚಿತವಾಗಿ ಟೈಪಾಯಿಡ್ ಲಸಿಕೆ ಹಾಕಲಾಯಿತು   

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಟೈಪಾಯಿಡ್ ಲಸಿಕೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಸರ್ಜಿ ಫೌಂಡೇಷನ್, ರೌಂಡ್ ಟೇಬಲ್ ಇಂಡಿಯಾ, ಭಾರತ ಸೇವಾದಳ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶನಿವಾರ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹರ್ ಘರ್ ತಿರಂಗಾ ಅರಿವು ಜಾಥಾ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದಲ್ಲಿ ಹಲವು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದೆ. ಹಲವೆಡೆ ನೆರೆ ಉಂಟಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. 100 ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. 2000 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದುಸರ್ಜಿ ಫೌಂಡೇಷನ್ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ ಸರ್ಜಿಹೇಳಿದರು.

ADVERTISEMENT

ಸಾವಿರಕ್ಕೂ ಹೆಚ್ಚು ಮಕ್ಕಳು ತಿರಂಗಾ ಜಾಥಾ ನಡೆಸಿದರು. ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎದುರು ಜಾಥಾ ಬಂದಾಗ ಆಸ್ಪತ್ರೆಯ ಸಿಬ್ಬಂದಿ ಮಕ್ಕಳ ಮೇಲೆ ಪುಷ್ಪ ವೃಷ್ಟಿ ಮಾಡಿದರು.

ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ವೈ.ಎಚ್. ನಾಗರಾಜ್, ಡಿಡಿಪಿಐ ಪರಮೇಶ್ವರಪ್ಪ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಸದಸ್ಯೆ ಮೀನಾಕ್ಷಿ ಗೋವಿಂದ ರಾಜು, ಶಾಲೆಯ ಮುಖ್ಯಶಿಕ್ಷಕ ಕೆ.ಎಂ. ಮೋಹನ್, ಬಿಇಒ ನಾಗರಾಜ್, ಸೇವಾದಳದ ಪ್ರಸನ್ನ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.