ADVERTISEMENT

ಕಿರಿಯ ಎಂಜಿನಿಯರ್ ಅಮಾನತು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 7:27 IST
Last Updated 7 ನವೆಂಬರ್ 2022, 7:27 IST

ತೀರ್ಥಹಳ್ಳಿ: ‘ಜಲ ಜೀವನ್‌ ಮಿಷನ್‌’ ಕಾಮಗಾರಿ ನಿರ್ವಹಣೆಯಲ್ಲಿ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಎಂಜಿನಿಯರ್‌ ಕೆ.ಮುರುಗೇಶ್‌ ಅವರನ್ನು ಅಮಾನತು ಮಾಡಲಾಗಿದೆ.

ಸರ್ಕಾರೀ ಹಣದ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ನ. 2ರಂದು ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎನ್.ಡಿ.ಪ್ರಕಾಶ ಆದೇಶ ಹೊರಡಿಸಿದ್ದಾರೆ.

ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗಲವಳ್ಳಿ ಗ್ರಾಮದಲ್ಲಿ ‘ಜಲಜೀವನ್‌ ಮಿಷನ್‌’ ಕಾಮಗಾರಿಯ ಎಫ್‌ಎಚ್‌ಟಿಸಿ ಅಳವಡಿಸಿದ್ದು, ನಲ್ಲಿಗಳಿಗೆ ನೀರು ಸಂಪರ್ಕ ಕಲ್ಪಿಸಿಲ್ಲ. ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್‌ಲೈನ್‌ನಿಂದ ಎಫ್‌ಎಚ್‌ಟಿಸಿವರೆಗೆ ಪೈಪ್‌ಲೈನ್‌ ಮಾಡದೇ ಅಪೂರ್ಣಗೊಳಿಸಿದ್ದಾರೆ. 8 ತಿಂಗಳ ಹಿಂದಿನ ಕಾಮಗಾರಿ ಇದಾಗಿದ್ದು, ಮಾಹಿತಿ ನೀಡಲು ಮುರುಗೇಶ್‌ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವಾ ನಿಯಮದ ಅಡಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.