ADVERTISEMENT

ಭದ್ರಾವತಿ: ಪಿಯುಸಿ, ಎಸ್‌ಎಸ್‌ಎಲ್‌ಸಿ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 14:15 IST
Last Updated 3 ಜೂನ್ 2025, 14:15 IST
ಭದ್ರಾವತಿ ತಾಲ್ಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು
ಭದ್ರಾವತಿ ತಾಲ್ಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು    

ಭದ್ರಾವತಿ: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಮಕ್ಕಳಿಗೆ ವೀರಶೈವ ಲಿಂಗಾಯತ ಸಮಾಜದ ಮಹಿಳಾ ಘಟಕದ ವತಿಯಿಂದ ಈಚೆಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾಜದ ಗೌರವ ಸಲಹೆಗಾರರಾದ ಪ್ರಾಧ್ಯಾಪಕಿ ವಿಜಯಾದೇವಿ ಪ್ರತಿಭಾ ಪುರಸ್ಕಾರ ನೀಡುವ ಉದ್ದೇಶ ಹಾಗೂ ವಿದ್ಯಾರ್ಥಿಗಳ ಮುಂದಿನ ಗುರಿಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾಜದ ಅಧ್ಯಕ್ಷರಾದ ನಾಗರತ್ನ ವಾಗೀಶ್ ಕೋಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಪ್ರಧಾನ ಕಾರ್ಯದರ್ಶಿ ಕುಸುಮಾ ವಾರ್ಷಿಕ ವರದಿ ಓದಿದರು. ಖಜಾಂಚಿ ಪರಿಮಳ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ADVERTISEMENT

ಸಮಾಜದ ಗೌರವಾಧ್ಯಕ್ಷೆ ಆರ್.ಎಸ್.ಶೋಭಾ, ಉಪಾಧ್ಯಕ್ಷೆ ನಾಗರತ್ನ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಕವಿತಾ ಮತ್ತು ಮಮತಾ ಪ್ರಾರ್ಥಿಸಿದರು. ನಗರಸಭೆ ಸದಸ್ಯೆ ಅನುಪಮಾ ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.