ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 2:54 IST
Last Updated 2 ಮಾರ್ಚ್ 2022, 2:54 IST

ಸಾಗರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಮರತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಚಂದ್ರಶೇಖರ್ ಅವರು ಕೆಲವು ದಿನಗಳಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ಎಸ್‌ಡಿಎಂಸಿಯ ಪ್ರಮುಖರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಅವರು ಶಾಲೆಗೆ ಸೋಮವಾರ ಭೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ ಶಿಕ್ಷಕ ಚಂದ್ರಶೇಖರ್ ಅವರು ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.