
ತ್ಯಾಗರ್ತಿ: ನೆಮ್ಮದಿಯ ಜೀವನಕ್ಕಾಗಿ ಗ್ರಾಮದಲ್ಲಿ ದೇವಸ್ಥಾನ, ಸಂಸ್ಕಾರ ಹಾಗೂ ವಿಧ್ಯಾಭ್ಯಾಸಕ್ಕಾಗಿ ಶಾಲೆಗಳಿದ್ದರೆ ಊರು ಸಮೃದ್ಧಿಯಾಗುತ್ತದೆ ಎಂದು ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ಆನೆ ಹಾವಳಿಗೆ ತುತ್ತಾದ ತೋಟಗಳನ್ನು ಭಾನುವಾರ ವೀಕ್ಷಿಸಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬೇಟಿ ನೀಡಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಇವರು ಸರ್ಕಾರದಿಂದ ನಷ್ಟ ಭರಿಸಲು ಒಂದು ಬಾಳೆ ಗಿಡಕ್ಕೆ 200ರೂ ಹಾಗೂ ಅಡಿಕೆ ಗಿಡಗಳಿಗೆ 800ರೂ ನಿಗದಿ ಮಾಡಿದ್ದು ಸಂಭAಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ವರದಿ ಸಲ್ಲಿಸಿದ ನಂತರ ಸರ್ಕಾರದಿಂದ ನಷ್ಟ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ತಹಶೀಲ್ದಾರ್ ರಶ್ಮಿ, ತ್ಯಾಗರ್ತಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಪ್ರಭಾವತಿ ಲೋಕಪ್ಪ, ಅರಣ್ಯ ಇಲಾಖೆಯ ಅಧಿಕಾರಿಗಳು, ತ್ಯಾಗರ್ತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಮಲಾ, ಗ್ರಾಮಪಂಚಾಯಿತಿ ಸದಸ್ಯರಾದ ಗಿರೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಶೇಖರ್ ಲಾವಿಗೆರೆ, ಹಾಗೂ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.