
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಸಾಗರ ತಾಲ್ಲೂಕಿನ ಯಡೇಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಪತ್ತೆಯಾಗಿದೆ.
ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ. ಪರಶುರಾಮನ ಮೃತದೇಹ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪರಶುರಾಮ ಬಾಬು ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಚೆನ್ನಾಗಿ ಓದುತ್ತಿದ್ದ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.