ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 2:39 IST
Last Updated 3 ಡಿಸೆಂಬರ್ 2020, 2:39 IST

ಹೊಸನಗರ: ತಾಲ್ಲೂಕಿನದುಮ್ಮ ಗ್ರಾಮದ ನೆವಲೋಡಿಯ ಗ್ರಾಮದಲ್ಲಿ ಸಾಲದ ಹೊರೆಯಿಂದ ರೈತಹಾಲಪ್ಪ (35) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಲಪ್ಪ ಸ್ಥಳೀಯ ಕಳೂರು ಸಹಕಾರ ಸಂಘ ಸೇರಿ ಖಾಸಗಿಯಾಗಿ ₹ 1 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು.ಸೋಮವಾರ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಅವರಿಗೆ ಪತ್ನಿ, ಪುತ್ರಿ ಇದ್ದಾರೆ.ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.