ADVERTISEMENT

ವಚನ ಚಳವಳಿಯಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆ

ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 4:12 IST
Last Updated 22 ಜನವರಿ 2022, 4:12 IST
ಸಾಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಶಾಸಕ ಎಚ್.ಹಾಲಪ್ಪ ಹರತಾಳು ಉದ್ಘಾಟಿಸಿದರು.
ಸಾಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಶಾಸಕ ಎಚ್.ಹಾಲಪ್ಪ ಹರತಾಳು ಉದ್ಘಾಟಿಸಿದರು.   

ಸಾಗರ: ‘ವಚನ ಚಳವಳಿ ಮೂಲಕ 12ನೇ ಶತಮಾನದಲ್ಲೇ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ನಮ್ಮ ನೆಲದಲ್ಲಿ ಬಿತ್ತಿದ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ’ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅನುಭವ ಮಂಟಪ ಸ್ಥಾಪನೆಯ ಚೌಕಟ್ಟಿನಲ್ಲೇ ಪ್ರಜಾಪ್ರಭುತ್ವದ ಆಶಯವನ್ನು ದಟ್ಟವಾಗಿ ಕಾಣಬಹುದು. ಇಂತಹ ಆದರ್ಶದ ಹಿಂದೆ ಅಂಬಿಗರ ಚೌಡಯ್ಯ ಅವರಂತಹ ಹಲವು ವಚನಕಾರರ ಚಿಂತನೆ ಅಡಗಿದೆ ಎಂದರು.

ADVERTISEMENT

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ‘ಕಾಯಕದ ಮೂಲಕವೇ ಬದುಕಿನಲ್ಲಿ ತೃಪ್ತಿ ಕಂಡುಕೊಳ್ಳಲು ಸಾಧ್ಯ ಎಂದು ಪ್ರತಿಪಾದಿಸಿದ ಅಂಬಿಗರ ಚೌಡಯ್ಯ ಅವರ ಚಿಂತನೆ ಸರ್ವ ಕಾಲಕ್ಕೂ ಪ್ರಸ್ತುತ’ ಎಂದು ಹೇಳಿದರು.

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಕಮ್ಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ, ಗೌರವಾಧ್ಯಕ್ಷ ಜಿ.ಬಸವರಾಜ್, ಗಂಗಾ ಮತ ಸಮಾಜದ ಅಧ್ಯಕ್ಷ ಶಿವಾನಂದ್, ಲಕ್ಷ್ಮಣ್ ಮಾಗಡಿ, ನಗರಸಭೆ ಸದಸ್ಯರಾದ ಟಿ.ಡಿ.ಮೇಘರಾಜ್, ಕೆ.ಆರ್.ಗಣೇಶ್ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.