ADVERTISEMENT

ಶಿಕ್ಷಣಕ್ಕೆ ಮಠಗಳ ಕೊಡುಗೆ ಅಪಾರ

ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 5:37 IST
Last Updated 16 ಅಕ್ಟೋಬರ್ 2021, 5:37 IST
ಶಿವಮೊಗ್ಗದ ಬೆಕ್ಕಿನ ಕಲ್ಮಠ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಬಸವ ಸ್ವಾಮೀಜಿ ಅವರ ಶಿಲಾ ಮಂಟಪ ಹಾಗೂ ಶಿವಾಲಯ ನಿರ್ಮಾಣ ಕಾರ್ಯಕ್ಕೆ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಚಾಲನೆ ನೀಡಿದರು.
ಶಿವಮೊಗ್ಗದ ಬೆಕ್ಕಿನ ಕಲ್ಮಠ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಬಸವ ಸ್ವಾಮೀಜಿ ಅವರ ಶಿಲಾ ಮಂಟಪ ಹಾಗೂ ಶಿವಾಲಯ ನಿರ್ಮಾಣ ಕಾರ್ಯಕ್ಕೆ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಚಾಲನೆ ನೀಡಿದರು.   

ಶಿವಮೊಗ್ಗ: ವಿದ್ಯಾಸಂಸ್ಥೆ ತೆರೆಯುವ ಮೂಲಕ ಶಿಕ್ಷಣಕ್ಕೆ ಮಠಗಳು ನೀಡಿರುವ ಕೊಡುಗೆ ಸ್ಮರಣೀಯ ಎಂದು ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.

ನಗರದ ಬೆಕ್ಕಿನ ಕಲ್ಮಠ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಬಸವ ಸ್ವಾಮೀಜಿ ಅವರ ಶಿಲಾ ಮಂಟಪ ಹಾಗೂ ಶಿವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಠಗಳು ಶಿಕ್ಷಣ ಸಂಸ್ಥೆ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ. ಮಠಗಳು ಒಂದು ಜಾತಿಗೆ ಸೀಮಿತವಾಗಿಲ್ಲ. ಸಮಾಜ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿವೆ. ಶತಮಾನದಲ್ಲಿ ಶರಣರು ಕಾಯಕದ ಮಹತ್ವ ಸಾರಿದರು. ಸಮಾಜದಲ್ಲಿ ಬೇರುಬಿಟ್ಟಿದ್ದ ಜಾತಿಭೇದ, ಲಿಂಗ, ತಾರತಮ್ಯದ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಅವರ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ’ ಎಂದು ಕಿವಿಮಾತು ಹೇಳಿದರು.

ADVERTISEMENT

ಹಿಂದೆ ಯುದ್ಧದಲ್ಲಿ ಶಸ್ತ್ರಗಳನ್ನು ಬಳಕೆ ಮಾಡುತ್ತಿದ್ದರು. ಅವು ಈಗ ನಿರು‍ಪಕ್ತವಾಗಿವೆ. ದಸರಾ ಸಂದರ್ಭದಲ್ಲಿ ಅವುಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ, ಇವತ್ತು ಕೊರೊನಾ ವಿರುದ್ಧ ಗೆಲ್ಲ ಬೇಕಾದರೆ ಆತ್ಮವಿಶ್ವಾಸ ಎಂಬ ಅಸ್ತ್ರವನ್ನು ಗಳಿಸಿಕೊಳ್ಳಬೇಕಿದೆ. ಜೀವನದ ಹಾದಿ ಸಂಸ್ಕಾರಯುತವಾದಾಗ ಬದುಕಿನಲ್ಲಿ ನೆಮ್ಮದಿ ಇರುತ್ತದೆಎಂದರು.

‘ರಾಜ್ಯದಲ್ಲಿ ಇರುವ ಮಠಗಳ ಸಂಖ್ಯೆ ಅಧಿಕ. ನಾನು ಅಲ್ಲ ನಾವು ಎಂಬ ಮನೋಭಾವ ಜೊತೆಗೆ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕವಾಗಿ ಸಂಸ್ಕಾರವನ್ನು ಬಿತ್ತುವ ಕೆಲಸವನ್ನು ಮಠಗಳು ಮಾಡಿಕೊಂಡು ಬಂದಿವೆ. ಇದರಿಂದ ನಾಡು ಅಭಿವೃದ್ಧಿಯಾಗಿದೆ.ಆಧುನಿಕ ಬದುಕಿನಲ್ಲಿ ಜನರು ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಶ್ರೀಗಳ ಶಿಲಾಮಂಟಪದ ಆವರಣದಲ್ಲಿ ಧ್ಯಾನ ಹಾಗೂ ಮೌನ ವ್ರತಕ್ಕೆ ಸ್ಥಳಾವಕಾಶ ಕಲ್ಪಿಸಲಾಗುವುದು’ ಎಂದುಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಶಿವಾಲಯ ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್,ಅಧ್ಯಕ್ಷ ಎಚ್.ವಿ. ಮಹೇಶ್ವರಪ್ಪ, ಉಪಾಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಎನ್.ಜೆ. ರಾಜಶೇಖರ್, ಸಿ.ಎಸ್. ಷಡಾಕ್ಷರಿ, ಗೋವಿಂದ ನಾಯರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.