ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯ ಸೋಮಿನಕೊಪ್ಪ ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ಗುರುವಾರ ಸಂಜೆ ಮೃತಪಟ್ಟಿದ್ದಾರೆ.
ಪೂಜಾ (10) ಹಾಗೂ ಮಾಲತೇಶ್ (9) ಮೃತಪಟ್ಟ ಸಹೋದರಿ ಹಾಗೂ ಸಹೋದರ.
ಗ್ರಾಮಸ್ಥರು ಕೆರೆಯಲ್ಲಿ ಮೀನು ಹಿಡಿಯುತ್ತಿದ್ದರು. ಅದನ್ನು ಗಮನಿಸಿದ ಮಕ್ಕಳು ಮೀನುಹಿಡಿಯಲು ಮುಂದಾಗಿದ್ದಾರೆ. ಆಗ ಕೆರೆಗೆ ಬಿದ್ದಿದ್ದಾರೆ.ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ 15 ತಾಸುಗಳ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದರು.
ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.