ADVERTISEMENT

ನ. 9ರಂದು ಪುರಸಭೆ ಅಧ್ಯಕ್ಷರ ಚುನಾವಣೆ

ಬಿರುಸುಗೊಂಡ ಆಕಾಂಕ್ಷಿಗಳ ರಾಜಕೀಯ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 16:48 IST
Last Updated 28 ಅಕ್ಟೋಬರ್ 2020, 16:48 IST
ಶಿಕಾರಿಪುರ ಪುರಸಭೆ ಕಚೇರಿ
ಶಿಕಾರಿಪುರ ಪುರಸಭೆ ಕಚೇರಿ   

ಶಿಕಾರಿಪುರ: ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ. 9ರಂದು ಚುನಾವಣೆ ನಡೆಯಲಿದ್ದು, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ.

ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ 2ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಯಾಗಿದೆ. ಪ್ರಸ್ತುತ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲು ಅಗತ್ಯವಾದ ಸದಸ್ಯರನ್ನು
ಹೊಂದಿದೆ.

ಪುರಸಭೆಯಲ್ಲಿ ಪಕ್ಷೇತರ ಸದಸ್ಯರಿಬ್ಬರೂ ಸೇರಿ ಬಿಜೆಪಿ 11 ಸ್ಥಾನ ಹೊಂದಿದೆ. ಅಗತ್ಯ ಬಿದ್ದರೆ ಮಾತ್ರ ಮುಖ್ಯಮಂತ್ರಿ ಹಾಗೂ ಸ್ಥಳೀಯ ಶಾಸಕ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತಗಳನ್ನು ಸೇರಿ ಬಿಜೆಪಿ ಒಟ್ಟು 13 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ADVERTISEMENT

ಪುರಸಭೆ ಮೀಸಲಾತಿ ಪ್ರಕಾರ ಹಿಂದುಳಿದ ವರ್ಗ 2ಎ ಮಹಿಳೆ ಮೀಸಲಾತಿ ಪ್ರಕಾರ ಪಕ್ಷೇತರ ಸದಸ್ಯೆ 16ನೇ ವಾರ್ಡ್‌ನ ರೇಖಾಬಾಯಿ ಮಂಜುನಾಥ್ ಸಿಂಗ್, ಬಿಜೆಪಿಯ 12ನೇ ವಾರ್ಡ್ ಸದಸ್ಯೆ ಲಕ್ಷ್ಮಿ ಮಹಾಲಿಂಗಪ್ಪ, 7ನೇ ವಾರ್ಡ್‌ನ ರೂಪ ಮಂಜುನಾಥ್ ಮೂವರಲ್ಲಿ ಒಬ್ಬರಿಗೆ ಅಧ್ಯಕ್ಷ ಸ್ಥಾನ ದೊರೆಯುವ ಅವಕಾಶವಿದೆ. ಪುರಸಭೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.