ಸೊರಬ: ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಸ್ವಗ್ರಾಮ ಯಲವಾಳದಲ್ಲಿ ಭಾನುವಾರ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಯೋಗ ಮಾಡುವ ಮೂಲಕ ಯೋಗದಿನವನ್ನು ಆಚರಿಸಿದರು.
ತಾಲ್ಲೂಕಿನ ಯಲವಾಳ ಗ್ರಾಮಕ್ಕೆ ಕೃಷಿ ಸಚಿವರೊಂದಿಗೆ ಬಂದಿದ್ದ ಬಿ.ಸಿ. ಪಾಟೀಲ್ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಯೋಗ ಮಾಡಿ ಕೆಲಹೊತ್ತು ಪರಸ್ಪರ ಹರಟೆಯಲ್ಲಿ ತೊಡಗಿದ್ದು ಕಂಡುಬಂತು.
ಬಳಿಕ ಮಾತನಾಡಿದ ಬಿ.ಸಿ. ಪಾಟೀಲ್, ‘ಯೋಗ ಎನ್ನುವುದು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿದ್ದ ಯೋಗವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಯೋಗಕ್ಕೆ ತನ್ನದೇ ಆದ ಇತಿಹಾಸವಿದ್ದು, ವೈಜ್ಞಾನಿಕವಾಗಿಯೂ ಸಹಕಾರಿ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ, ಯೋಗ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.