ADVERTISEMENT

ದಾರಿದೀಪವಾದ ವಾಲ್ಮೀಕಿಯ ಮಹಾಕಾವ್ಯ

ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 8:04 IST
Last Updated 21 ಅಕ್ಟೋಬರ್ 2021, 8:04 IST
ಸೊರಬದಲ್ಲಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
ಸೊರಬದಲ್ಲಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಸೊರಬ: ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ಕಲಿಯಬಹುದು. ಜಾತಿಯ ಹೆಸರಿನಲ್ಲಿ ಮಾನವೀಯ ಸಂಬಂಧಗಳು ಕುಸಿಯುತ್ತಿರುವ ಪ್ರಸ್ತುತ ದಿನಗಳಲ್ಲಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಮಹಾಕಾವ್ಯ ದಾರಿದೀಪ ಎಂದು ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್ ಹೇಳಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಾಲ್ಮೀಕಿ ಸಮಾಜದದಿಂದ ಬುಧವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಾವು ಒಳ್ಳೆಯವರಾಗಿ ಅಥವಾ ಕೆಟ್ಟವರಾಗಿ ಹುಟ್ಟಿಲ್ಲ ಎಂಬುದನ್ನು ವಾಲ್ಮೀಕಿಯ ಜೀವನವು ನಮಗೆ ಕಲಿಸುತ್ತದೆ. ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ. ವಾಲ್ಮೀಕಿಯನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು’ ಎಂದರು.

ADVERTISEMENT

ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಉಮೇಶ್ ಭದ್ರಾಪುರ ಮಾತನಾಡಿ, ‘ವಾಲ್ಮೀಕಿ ಅವರ ಜೀವನ ಮತ್ತು ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ತಹಶೀಲ್ದಾರ್ ಶಿವಾನಂದ ಪಿ. ರಾಣೆ ಅಧ್ಯಕ್ಷತೆ ವಹಿಸಿದ್ದರು. ವಾಲ್ಮೀಕಿ ಸಮಾಜದ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೆ.ಜಿ. ಕುಮಾರ್, ಸಿಪಿಐ ಎಲ್. ರಾಜಶೇಖರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ಮಂಜುನಾಥ್, ವಕೀಲರ ಸಂಘದ ಕಾರ್ಯದರ್ಶಿ ಸುರೇಶ್ ಕಲ್ಲಂಬಿ, ಎಪಿಎಂಸಿ ಸದಸ್ಯ ನಾಗರಾಜ್, ಟಿಎಚ್‌ಒ ವಿನಯ್ ಪಾಟೀಲ್, ಬಿಇಒ ನಂಜರಾಜ್, ಗುರುರಾಜ್, ಬಸವರಾಜ ಹಸ್ವಿ, ಅಶ್ವಿನಿ ಆರ್. ಭಂಡಾರೆ, ಚಂದ್ರಪ್ಪ, ವಾರ್ಡನ್ ಗಳಾದ ಕೆ.ಶಿವಪ್ಪ, ಶೀಲಾ, ಮೃತ್ಯುಂಜಯ, ಶಂಕರ್‌ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.