ADVERTISEMENT

ತೀರ್ಪು ನ್ಯಾಯಕ್ಕೆ ಸಿಕ್ಕ ಗೆಲುವು: ಮೇಘರಾಜ್

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 8:50 IST
Last Updated 1 ಅಕ್ಟೋಬರ್ 2020, 8:50 IST
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಕಾರಣ ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಕಾರಣ ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು   

ಸಾಗರ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರು ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿರುವುದು ನ್ಯಾಯಕ್ಕೆ ಸಿಕ್ಕಿರುವ ಗೆಲುವು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.

ಬುಧವಾರ ಸಾಗರ್ ಹೋಟೆಲ್ ವೃತ್ತದಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು.

ಕಾಂಗ್ರೆಸ್ ಕೊಳೆಯನ್ನು ಸಂಪೂರ್ಣವಾಗಿ ತೊಳೆಯುವ ಮೂಲಕ ಉತ್ತಮ ಆಡಳಿತ ನೀಡುವ ಸಂಕಲ್ಪವನ್ನು ಬಿಜೆಪಿ ಮಾಡಿದೆ ಎಂದು ಹೇಳಿದರು.

ADVERTISEMENT

ಶಾಸಕ ಎಚ್.ಹಾಲಪ್ಪ ಹರತಾಳು ಅವರು ಆರೋಗ್ಯವಾಗಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಆದಾಗ್ಯೂ ಕೆಲವು ವಿಕೃತ ಮನಸ್ಸಿನವರು ಹಾಲಪ್ಪ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.
ವಿರೋಧ ಪಕ್ಷದವರು ರಚನಾತ್ಮಕವಾಗಿ ಕೆಲಸ ಮಾಡಬೇಕೇ ಹೊರತು ಇಂತಹ ಕ್ಷುಲ್ಲಕ ಕೆಲಸಕ್ಕೆ ಮುಂದಾಗಬಾರದು ಎಂದು ಟೀಕಿಸಿದರು.

ಬಿಜೆಪಿಯ ಪ್ರಮುಖರಾದ ಕೆ.ಆರ್. ಗಣೇಶ್ ಪ್ರಸಾದ್, ಸಂತೋಷ್ ಶೇಟ್, ವಿ. ಮಹೇಶ್, ಸತೀಶ್ ಮೊಗವೀರ, ಚೇತನ್ ರಾಜ್ ಕಣ್ಣೂರ್, ದೇವೇಂದ್ರಪ್ಪ ಯಲಕುಂದ್ಲಿ, ಗೌತಮ್, ಮೈತ್ರಿ ಪಾಟೀಲ್, ಮಧುರಾ ಶಿವಾನಂದ್, ಪ್ರೇಮಾ ಕಿರಣ್ ಸಿಂಗ್, ಭಾವನಾ ಸಂತೋಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.