ಭದ್ರಾವತಿ: ತಾಲ್ಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿ ಮನೆಯೊಂದರ ಹೆಂಚು ತೆಗೆದು ಒಳಗೆ ಪ್ರವೇಶಿಸಿದ ಕಳ್ಳರು ನಗದು, ಚಿನ್ನಾಭರಣ ಕಳವು ಮಾಡಿದ್ದಾರೆ.
ಗ್ರಾಮದ ನಾಗರಾಜ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಜೂನ್ 13ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ತುಮಕೂರಿಗೆ ಹೋಗಿದ್ದರು. ಸಂಜೆ ವೇಳೆಗೆ ಹಿಂದಿರುಗಿ ಬಂದು ನೋಡಿದಾಗ ಕಳ್ಳತನ ಮಾಡಿರುವುದು ತಿಳಿದು ಬಂದಿದೆ.
ಬೀರುವಿನಲ್ಲಿದ್ದ ₹ 65,000 ಮೌಲ್ಯದ ಚಿನ್ನಾಭರಣ ಹಾಗೂ ₹ 3 ಲಕ್ಷ ನಗದು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.