ADVERTISEMENT

ಸಾಗರ: ‘ರಕ್ತದಾನದಿಂದ ಅಡ್ಡ ಪರಿಣಾಮ ಇಲ್ಲ’

​ಪ್ರಜಾವಾಣಿ ವಾರ್ತೆ
Published 21 ಮೇ 2025, 14:26 IST
Last Updated 21 ಮೇ 2025, 14:26 IST
ಸಾಗರದ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಸಾಗರದ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.   

ಸಾಗರ: ‘ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಅವರ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ’ ಎಂದು ರೋಟರಿ ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಜಿ.ಸಂಗಂ ಹೇಳಿದರು.

ಇಲ್ಲಿನ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ರಕ್ತದಾನ ಅತ್ಯಂತ ಪವಿತ್ರವಾದ ಕಾರ್ಯವಾಗಿದೆ. ವಿದ್ಯಾರ್ಥಿ ಯುವಜನರು ರಕ್ತದಾನದ ಮಹತ್ವದ ಕುರಿತು ಸಮಾಜದಲ್ಲಿ ಅರಿವು ಮೂಡಿಸಲು ಮುಂದಾಗಬೇಕು’ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್, ‘ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ನಮ್ಮ ಸಂಸ್ಥೆ ಮೊದಲಿನಿಂದಲೂ ಆದ್ಯತೆ ನೀಡುತ್ತಿದೆ. ಶಿಕ್ಷಣ ಎಂಬುದು ವ್ಯಾಪಾರವಲ್ಲ, ಅದೊಂದು ಸಾಮಾಜಿಕ ಬದ್ಧತೆ ಎಂದು ಹೇಳಿದರು.

ADVERTISEMENT

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಪ್ರಮುಖರಾದ ಅಂಕಿತಾ, ಶರಣ ಬಸವನಾಯ್ಕ, ಶಿಲ್ಪಾ ವಿ.ಎನ್, ಪ್ರಕಾಶ್ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.