ADVERTISEMENT

ಕಳವಿಗೆ ಯತ್ನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 4:53 IST
Last Updated 14 ಫೆಬ್ರುವರಿ 2026, 4:53 IST
ಕಳವು ಮಾಡಲು ಬಂದಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಕಳವು ಮಾಡಲು ಬಂದಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು   

ಸಾಗರ: ತಾಲ್ಲೂಕಿನ ಕಾನ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಂಕೇರಿ ಗ್ರಾಮದಲ್ಲಿ ಶುಕ್ರವಾರ ಹಗಲು ಹೊತ್ತಿನಲ್ಲೇ ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರಿನ ಮುತ್ತಪ್ಪ ಎಂಬಾತ ರೈತರೊಬ್ಬರ ಮನೆಯಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ಕದಿಯಲು ಬಂದಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಆತನನ್ನು ಹಿಡಿದು ಥಳಿಸಿದ ಗ್ರಾಮಸ್ಥರು, ಲಘು ವಾಹನವೊಂದರಲ್ಲಿ ಮೆರವಣಿಗೆ ಮಾಡಿ ಸಾಗರದ ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.