
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಮಂಗನ ಕಾಯಿಲೆ) ಸೋಂಕಿತ ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಯುವಕ ಜನವರಿ 20ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿಲ್ಲ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.