
ಪ್ರಜಾವಾಣಿ ವಾರ್ತೆ
ತೀರ್ಥಹಳ್ಳಿ: ಅಂಗವಿಕಲರ 14 ರಿಂದ 17 ವರ್ಷದ ವಯೋಮಾನದ ಗುಂಡು ಎಸೆತ ಸ್ಪರ್ಧೆಯಲ್ಲಿ ಬಾವಿಕೈಸರು ಸರ್ಕಾರಿ ಪ್ರೌಢಶಾಲೆಯ ಸುಧನ್ವ ಎನ್.ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಮತ್ತು ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ 10.86 ಮೀಟರ್ ದೂರಕ್ಕೆ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುಧನ್ವ ಸಂತೆಹಕ್ಲು ಸವಿತಾ ಕೆ.ಎಸ್. ಮತ್ತು ನಾಗೇಂದ್ರ ಎಸ್.ಬಿ. ದಂಪತಿ ಪುತ್ರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.