ADVERTISEMENT

ಕಾಲಮಿತಿಯ ಒಳಗೆ ಮಿಸಲಾತಿ ಕೋರುವ ಬೆದರಿಕೆ ಸಲ್ಲದು: ಸಚಿವ ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 10:38 IST
Last Updated 22 ಫೆಬ್ರುವರಿ 2021, 10:38 IST
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ರಾಜ್ಯದಲ್ಲಿ ಯಾವುದೇ ಜಾತಿಯ ಜನರು ಮಿಸಲಾತಿ ಕೇಳಿದರೂ ಅಂಬೇಡ್ಕರ್ ಅವರ ಆಶಯದಂತೆ ಅರ್ಹತೆಯೇ ಮಾನದಂಡವಾಗಲಿದೆ. ಕಾಲಮಿತಿಯ ಒಳಗೆ ಮಿಸಲಾತಿ ಕೋರುವ ಬೆದರಿಕೆ ಸಲ್ಲದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ಹಲವು ಸಮಾಜಗಳು ಮೀಸಲಾತಿ ಬೇಡಿಕೆ ಇಟ್ಟಿವೆ. ಮೀಸಲಾತಿ ಪಡೆಯಲು ಅರ್ಹತೆ ಇರುವ ಸಮಾಜಕ್ಕೆ ಖಂಡಿತ ಸೌಲಭ್ಯ ದೊರಕುತ್ತದೆ. ಶೋಷಿತ ಸಮುದಾಯಗಳ ಪರವಾಗಿ ಸ್ವಾಮೀಜಿಗಳು ನೇತೃತ್ವ ವಹಿಸಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಗಡುವಿನ ಒಳಗೆ ಮೀಸಲಾತಿ ನೀಡಬೇಕೆಂಬ ಬೆದರಿಕೆ ಸರಿಯಲ್ಲ. ಒತ್ತಾಯ ಮಾಡಿದ ತಕ್ಷಣ ಮೀಸಲಾತಿ ಕೊಡಲೂ ಸಾಧ್ಯವಿಲ್ಲ. ಹಿಂದುಳಿದ ವರ್ಗದ ಆಯೋಗ ಸಮಿತಿ ಶಿಫಾರಸು ಆಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪ್ರತಿಕ್ರಿಯಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಖರ ಹಿಂದುದ್ವವಾದಿ. ಹಾಗೆಂದು ಮುಖ್ಯಮಂತ್ರಿ ವಿರುದ್ಧ ಹೇಳಿಕೆ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಕಂಡಕಂಡಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ADVERTISEMENT

ಐಎಂಎ ಪ್ರಕರಣದಲ್ಲಿ ರಾಜಕೀಯ ಸಲ್ಲದು. ಆರ್.ವಿ. ದೇಶಪಾಂಡೆ, ಜಿ. ಪರಮೇಶ್ವರ್, ರೋಷನ್ ಬೇಗ್, ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ಆರೋಪ ಕೇಳಿ ಬಂದಿದೆ. ತನಿಖೆ ನಂತರ ಸತ್ಯ ಹೊರಬೀಳಲಿದೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.