ADVERTISEMENT

ಶಿವಮೊಗ್ಗ | ಪಿಎಫ್‌ಐ ಹೆಸರಲ್ಲಿ ಜೀವ ಬೆದರಿಕೆ: ಬಂಧನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 21:42 IST
Last Updated 17 ಜನವರಿ 2023, 21:42 IST

ರಿಪ್ಪನ್‌ಪೇಟೆ (ಶಿವಮೊಗ್ಗ ಜಿಲ್ಲೆ): ಸಮೀಪದ ಕೆಂಚನಾಲ ಗ್ರಾಮದ ಯುವಕನೊಬ್ಬನಿಗೆ ನಿಷೇಧಿತ ಸಂಘಟನೆ ಪಿಎಫ್‌ಐ ಹೆಸರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆಚಾಪುರ ಗ್ರಾಮದ ಜಾವೇದ್ ಅಹಮದ್ ಎಂಬಾತ ಬಂಧಿತ.

ಕೆಂಚನಾಲ ಗ್ರಾಮದ ಯುವಕ ಸುಮಂತ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.