
ತ್ಯಾಗರ್ತಿ: ರೈತರು ನೈಸರ್ಗಿಕವಾಗಿ ದೊರೆಯುವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಕೃಷಿಯನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಪ್ರತಿಯೊಬ್ಬ ವಿಧ್ಯಾರ್ಥಿಗಳು ಮಾಹಿತಿ ಕ್ರೋಢೀಕರಿಸಬೇಕೆಂದು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಯದ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಟಿ.ಎಲ್. ಹೇಳಿದರು
ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಅರಣ್ಯ ವಿಧ್ಯಾರ್ಥಿಗಳ ಗ್ರಾಮ ಜೀವನ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇರುವಕ್ಕಿ ಕೃಷಿ ವಿವಿಯ ಅಂತಿಮ ವರ್ಷದ ಬಿಎಸ್ಸಿ ಅರಣ್ಯ ವಿಧ್ಯಾರ್ಥಿಗಳು ಗ್ರಾಮೀಣ ಕೃಷಿಯ ಅನುಭವ, ರೈತರ ನಿಜವಾದ ಜೀವನದ ಬಗ್ಗೆ ತಿಳಿಯಲು 14 ದಿನಗಳು ಗ್ರಾಮೀಣ ಅರಣ್ಯ ಕಾರ್ಯಾನುಭವ ಕಾರ್ಯಕ್ರಮವನ್ನು ಹಿರೇಬಿಲಗುಂಜಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಮುಖ್ಯ ಉದ್ದೇಶ ಹಾಗೂ ರೈತರ ಸಮಸ್ಯೆಗೆ ನಮ್ಮ ವಿಶ್ವವಿದ್ಯಾಯದ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿ ವಿಧ್ಯಾರ್ಥಿಗಳು ಹಾಗೂ ರೈತರೊಂದಿಗೆ ಸಂವಾದ ನೆಡೆಸಿ ಮಾರ್ಗದರ್ಶನ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಕೃಷಿ ವಿಶ್ವವಿದ್ಯಾಯದ 47 ವಿಧ್ಯಾರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದು, ಪ್ರತಿನಿತ್ಯ ರೈತರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಆಲಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಪರಿಹಾರ ದೊರಕಿಸುತ್ತಾರೆ.
ತ್ಯಾಗರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಹನುಮಂತಪ್ಪ, ಧರ್ಮಪ್ಪ ಖಂಡೋಜಿ, ಮಂಜಪ್ಪ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.