ADVERTISEMENT

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಬಿಡುಗಡೆಗೆ ಆಗ್ರಹ

ಸುಳ್ಳು ಪ್ರಕರಣಗಳ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 5:10 IST
Last Updated 28 ಜೂನ್ 2022, 5:10 IST
ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು
ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು   

ಶಿವಮೊಗ್ಗ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‍ವಾಡ್ ವಿರುದ್ಧ ದಾಖಲಾದ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಮೂಲಕಪ್ರಗತಿಪರ ಸಂಘಟನೆಗಳ ಒಕ್ಕೂಟ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

ಗುಜರಾತ್ ಗಲಭೆಯಲ್ಲಿ ಮೋದಿ ಬಳಗಕ್ಕೆ ಸುಪ್ರೀಂ ಕೋರ್ಟ್ ಕ್ಲೀನ್‍ಚಿಟ್ ಕೊಟ್ಟ ಕಾರಣ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಆರಂಭಿಸಿದೆ. ಸುಳ್ಳು ಆರೋಪದ ಮೇಲೆ ತೀಸ್ತಾ ಸೆಟಲ್‍ವಾಡ್ ಅವರನ್ನು ವಿಚಾರಣೆ ಹೆಸರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದು ಘೋರ ಅನ್ಯಾಯ ಹಾಗೂ ಸರ್ವಾಧಿಕಾರಿಯ ದಬ್ಬಾಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಜರಾತ್ ಹತ್ಯಾಕಾಂಡದ ಬಲಿಪಶುಗಳ ಪರವಾಗಿ ನಿರಂತರ ಕಾನೂನು ಹೋರಾಟ ನಡೆಸುತ್ತಾ ಬಂದಿರುವ ತೀಸ್ತಾ ಸೆಟಲ್‍ವಾಡ್‌, ದೇಶದ ನ್ಯಾಯಪರತೆಯ ಸಾಕ್ಷಿಪ್ರಜ್ಞೆ ಯಾಗಿದ್ದಾರೆ. ರಾಷ್ಟ್ರಪತಿ ಮಧ್ಯೆ ಪ್ರವೇಶಿಸಿ ತೀಸ್ತಾ ಹಾಗೂ ಇತರರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದು ಬಿಡುಗಡೆ ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.

ADVERTISEMENT

ನಮ್ಮ ಹಕ್ಕು ವೇದಿಕೆಯ ಕೆ.ಪಿ.ಶ್ರೀಪಾಲ್, ಚಿಂತಕ ಪ್ರೊ.ರಾಜೇಂದ್ರಚೆನ್ನಿ, ಕರ್ನಾಟಕ ಜನಶಕ್ತಿಯ ಅನನ್ಯ ಶಿವು, ವಿಚಾರ ವೇದಿಕೆಯ
ಆರ್.ಕುಮಾರ್, ಹುಸೇನ್, ಗಿರೀಶ್ ನಾಯ್ಕ ಬೆಳಲಕಟ್ಟೆ, ಸುರೇಶ್ಅರಸಾಳು, ಮಂಜುನಾಥ ನವುಲೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.