ADVERTISEMENT

ಟ್ರಾಫಿಕ್ ಪೊಲೀಸ್ ಠಾಣೆ ಆರಂಭಿಸಲು ಕೋರಿ ಗೃಹ ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 5:13 IST
Last Updated 16 ಅಕ್ಟೋಬರ್ 2025, 5:13 IST
ಸಾಗರ ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು
ಸಾಗರ ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು   

ಸಾಗರ: ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಾಗರವು, ದಿನೆ ದಿನೆ ಬೆಳೆಯುತ್ತಿರುವ ನಗರ ಪ್ರದೇಶವಾಗಿದ್ದು ಈಚಿನ ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೊಂದು ಪ್ರವಾಸಿ ಕೇಂದ್ರಗಳಿಂದ ಸುತ್ತುವರೆದ ಪ್ರದೇಶವಾಗಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ನಗರವ್ಯಾಪ್ತಿಯಲ್ಲಿ ನೂತನ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನಾಡಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಸಿಗಂದೂರು ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರಕ್ಕೆ ಸಮೀಪವಿರುವ ತುಮರಿ-ಬ್ಯಾಕೋಡು ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ADVERTISEMENT

ಶಿಲ್ಪ ಗುರುಕುಲ ಕೊಠಡಿ ದುರಸ್ತಿಗೆ ₹65.80 ಲಕ್ಷ ಮಂಜೂರು: 

ನಗರದ ಶ್ರೀಗಂಧ ಕಲಾ ಸಂಕೀರ್ಣದ ಶಿಲ್ಪ ಗುರುಕುಲದ ಶಿಕ್ಷಣ ಕೊಠಡಿ, ವಸತಿ ಗೃಹ, ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ₹65.80 ಲಕ್ಷ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.