ADVERTISEMENT

ತಟ್ಟೆ, ಲೋಟ ಬಾರಿಸಿ ಸಾರಿಗೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 15:17 IST
Last Updated 12 ಏಪ್ರಿಲ್ 2021, 15:17 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಕೆಎಸ್‌ಆರ್‌ಟಿಸಿ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಕೆಎಸ್‌ಆರ್‌ಟಿಸಿ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: 6ನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮತ್ತು ಅವರ ಕುಟುಂಬ ವರ್ಗ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಟ್ಟೆ, ಲೋಟ ಬಾರಿಸುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ನೌಕರರಿಗೆ ಕಡಿಮೆ ವೇತನ ಸಿಗುತ್ತಿದೆ.ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಮಕ್ಕಳ ಶಿಕ್ಷಣ ವೆಚ್ಚ, ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ವೇತನ ಹೆಚ್ಚಳ ಮಾಡುವಂತೆ ಡಿಸೆಂಬರ್‌ನಲ್ಲಿ ಮುಷ್ಕರವನ್ನು ಕೈಗೊಂಡಾಗ ಸರ್ಕಾರ ಎರಡು ತಿಂಗಳಲ್ಲಿ ಬೇಡಿಕೆ ಈಡೇರಿಸುವ ಲಿಖಿತ ಭರವಸೆ ನೀಡಿತ್ತು. ಆದರೆ ಪ್ರಮುಖ ಬೇಡಿಕೆಯಾದ ವೇತನ ಹೆಚ್ಚಳ ಈಡೇರಿಸದೆ ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವಾರದಿಂದ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ಸ್ಪಂದಿಸಿಲ್ಲ. 6ನೇ ವೇತನ ಆಯೋಗ ಜಾರಿ ಮಾಡುವುದಾಗಿ ಭರವಸೆ ನೀಡಿಲ್ಲ. ಕಡಿಮೆ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ.ಬೇಡಿಕೆ ಈಡೇರಿಸದಿದ್ದರೆ ಕುಟುಂಬದ ಸದಸ್ಯರ ಜತೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಭದ್ರವತಿಯಲ್ಲಿ ನಗರ ಸಭೆಯ ಚುನಾವಣೆಯ ನೀತಿ ಸಂಹಿತೆ ಕಾರಣ ಅಲ್ಲಿನ ನೌಕರರೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಪ್ರತಿಭಟನೆ ನಡೆಸಿದರು.

ನೌಕರರ ಸಂಘದ ಪದಾಧಿಕಾರಿಗಳಾದ ಸಿ.ಸಂತೋಷ್ ಕುಮಾರ್, ಬಸವರಾಜ್, ಶಿವಕುಮಾರ್, ಶ್ರೀನಿವಾಸ್, ಈಶ್ವರ್, ಪರಶುರಾಮ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.