ADVERTISEMENT

ಸಾಗರ | ಬೃಹತ್ ಗಾತ್ರದ ಮರ ಉರುಳಿ ವಾಹನಗಳು ಜಖಂ

​ಪ್ರಜಾವಾಣಿ ವಾರ್ತೆ
Published 22 ಜುಲೈ 2023, 15:40 IST
Last Updated 22 ಜುಲೈ 2023, 15:40 IST
ಸಾಗರದ ಗಂಗಾಪರಮೇಶ್ವರಿ ರಸ್ತೆಯಲ್ಲಿ ಮಳೆಯಿಂದ ಬೃಹತ್ ಗಾತ್ರದ ಮರ ಉರುಳಿ ಹಲವು ವಾಹನಗಳು ಜಖಂಗೊಂಡಿದ್ದು, ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಸಾಗರದ ಗಂಗಾಪರಮೇಶ್ವರಿ ರಸ್ತೆಯಲ್ಲಿ ಮಳೆಯಿಂದ ಬೃಹತ್ ಗಾತ್ರದ ಮರ ಉರುಳಿ ಹಲವು ವಾಹನಗಳು ಜಖಂಗೊಂಡಿದ್ದು, ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಸಾಗರ: ನಗರದ ಗಂಗಾಪರಮೇಶ್ವರಿ ರಸ್ತೆಯಲ್ಲಿ ಮಳೆಯಿಂದ ಶುಕ್ರವಾರ ತಡರಾತ್ರಿ ಬೃಹತ್ ಗಾತ್ರದ ಬಸರಿ ಮರ ಉರುಳಿ ಹಲವು ವಾಹನಗಳು ಜಖಂಗೊಂಡಿವೆ. ಒಂದು ಓಮಿನಿ, ಒಂದು ಬೈಕ್, ಎರಡು ಕಾರುಗಳಿಗೆ ಹಾನಿ ಉಂಟಾಗಿದೆ.

ನಗರಸಭೆ ಸದಸ್ಯೆ ಮಧು ಮಾಲತಿ ಅವರ ಮನೆಯ ಛಾವಣಿಗೆ ಭಾಗಶಃ ಹಾನಿ ಉಂಟಾಗಿದ್ದು ಸುನಿಲ್ ಕುಮಾರ್ ಎಂಬವರ ಮನೆಗೂ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ.

ಇದೇ ಬಡಾವಣೆಯ ಪ್ರಸಾದ್ ಅವರ ಮನೆಯ ಹೆಂಚಿನ ಮೇಲೆ ಮರ ಬಿದ್ದ ಪರಿಣಾಮ ಮನೆಯೊಳಗಿದ್ದ ಟಿವಿ ಇನ್ನಿತರ ವಸ್ತು ನಾಶವಾಗಿದೆ. ಎರಡು ವಿದ್ಯುತ್ ಕಂಬ ಮುರಿದ್ದು ಬಿದ್ದಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ADVERTISEMENT

ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಸದಸ್ಯೆ ಮಧು ಮಾಲತಿ, ಎನ್.ಲಲಿತಮ್ಮ, ಸೈಯದ್ ಜಾಕೀರ್, ಮಾಜಿ ಸದಸ್ಯೆ ಮರಿಯಾ ಲೀಮಾ, ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ, ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.