ADVERTISEMENT

‘ಚಿಕಿತ್ಸೆ ಇಲ್ಲದೆ ರೋಗಿಗಳು ಕಂಗಾಲು’: ಸಿಎಂಗೆ ಪತ್ರ ಬರೆದ ಮಾಜಿ ಶಾಸಕ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 10:14 IST
Last Updated 19 ಸೆಪ್ಟೆಂಬರ್ 2020, 10:14 IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್‌ ಹಾಗೂ ಇತರೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಕಂಗಾಲಾಗಿದ್ದಾರೆ. ತಕ್ಷಣ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ರೋಗಿಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಸಾಮಾನ್ಯ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯದೆ ಹಲವರು ಸಾವಿನ ಮನೆ ಸೇರುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮತ್ತು ಐಸಿಯು ಕೊರತೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕಿತ್ಸೆ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಅವರ ತಂಡದ ಕಾರ್ಯ ವೈಖರಿ ಉತ್ತಮವಾಗಿದೆ. ಆದರೆ, ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಆಸ್ಪತ್ರೆಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಐಸಿಯುಗಳು, ತಜ್ಞ ವೈದ್ಯರು, ಆಮ್ಲಜನಕದ ಕೊರತೆ ನೀಗಿಸಬೇಕಿದೆ. ಈಗಾಗಲೇ ಶಿವಮೊಗ್ಗ ನಗರದ ಜನರು ಭಯಬೀತರಾಗಿದ್ದಾರೆ. ಕೋವಿಡ್‌ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.