
ಪ್ರಜಾವಾಣಿ ವಾರ್ತೆ
ಸೊರಬ: ಪೆಟ್ರೋಲ್ ಬಂಕ್‌ವೊಂದರ ಮುಂಭಾಗದಲ್ಲಿ ನಿಲುಗಡೆ ಮಾಡಿದ್ದ ಲಾರಿಯನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಗರ ಪಟ್ಟಣದ ಗಾಂಧಿನಗರ ನಿವಾಸಿ ಆರೀಫ್ ಆಹ್ಮದ್ ಎಂಬವರಿಗೆ ಸೇರಿದ ಲಾರಿಯೊಂದು ಪಟ್ಟಣದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗದಲ್ಲಿ ಕಳ್ಳತನವಾದ ಬಗ್ಗೆ ಈಚೆಗೆ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು, ಪಟ್ಟಣದ ಕಾನುಕೇರಿ ಬಡಾವಣೆ ನಿವಾಸಿ ಇಬ್ರಾಹಿಂ ಅಹಮ್ಮದ್ (26) ಎಂಬಾತನನ್ನು ಬಂಧಿಸಿದ್ದಾರೆ. ಅಂದಾಜು ₹.90 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.