ADVERTISEMENT

ಅಪಘಾತ: ಸುಧಾಕರ ಸಸಿಗೊಳ್ಳಿ ನಿಧನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 12:50 IST
Last Updated 24 ಜನವರಿ 2024, 12:50 IST
ಸುಧಾಕರ ಸಸಿಗೊಳ್ಳಿ 
ಸುಧಾಕರ ಸಸಿಗೊಳ್ಳಿ    

ತುಮರಿ: ಸಮೀಪದ ಬ್ಯಾಕೋಡಿನಲ್ಲಿ ಮಂಗಳವಾರ ತಡರಾತ್ರಿ ಬೈಕ್ ಮತ್ತು ಜೆಸಿಬಿ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸುಧಾಕರ ಸಸಿಗೊಳ್ಳಿ (55) ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ನಿಟ್ಟೂರಿನಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ನಗರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಅಪಘಾತ ಸಂಬಂಧ ಕಾರ್ಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT