ತುಮರಿ: ಸಿರಿಧಾನ್ಯಗಳ ಬಳಕೆ ಹೆಚ್ಚಿಸಲು ಮತ್ತು ಸಾವಯವ ಕೃಷಿ ಉತ್ತೇಜಿಸಲು ಕೃಷಿ ಇಲಾಖೆ ಏರ್ಪಡಿಸಿದ್ದ ವಾಣಿಜ್ಯ ಮೇಳದ ರಾಜ್ಯಮಟ್ಟದ ಮರೆತು ಹೋದ ಖಾದ್ಯಗಳ ಸ್ಪರ್ಧೆಯಲ್ಲಿ ದ್ವೀಪದ ವಳಗೆರೆ ಗ್ರಾಮದ ಎಂ. ಪದ್ಮಲತಾ ಜೈನ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಜ.8ರಂದು ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಮಲೆನಾಡಿನ ವಿಶಿಷ್ಟ ಬಿಳಿ ಮೆಣಸಿನಕಾಳಿನ ಬಾಣಂತಿಯರ ತಂಬಳಿ ಖಾದ್ಯ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಜ.23ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಾವಯವ ಕೃಷಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.