ADVERTISEMENT

ತುಮರಿ | ರಸ್ತೆ ಕಾಮಗಾರಿ: ಹಲ್ಕೆ – ಮುಪ್ಪಾನೆ ಲಾಂಚ್ ಸೇವೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 29 ಮೇ 2025, 11:15 IST
Last Updated 29 ಮೇ 2025, 11:15 IST
   

ತುಮರಿ (ಶಿವಮೊಗ್ಗ): ಸಾಗರ ತಾಲ್ಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಹಲ್ಕೆ – ಮುಪ್ಪಾನೆ ಲಾಂಚ್ ಸೇವೆ ಜೂನ್ 4ರ ವರೆಗೆ ಸ್ಥಗಿತ ಗೊಳಿಸಲಾಗಿದೆ ಎಂದು ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಕೆ ಮುಪ್ಪಾನೆ ಮಾರ್ಗಕ್ಕೆ ಕಾಂಕ್ರೀಟ್ ರಸ್ತೆ ಮಂಜೂರಾಗಿದ್ದು ಮೇ 29 ರಿಂದ ಜೂನ್ 4ರ ವರೆಗೆ ಮುಪ್ಪಾನೆ ಕಡವು ಬಳಿ ಕಾಂಕ್ರೀಟ್ ರಸ್ತೆ ಕಾಮಗಾರಿ ನೆಡೆಯಲಿದೆ. ಕಾಮಗಾರಿ ವೇಳೆ ಲಾಂಚ್ ಸೇವೆ ಸ್ಥಗಿತಗೊಳಿಸಲು ತುಮರಿ ಗ್ರಾಮ ಪಂಚಾಯ್ತಿ ಮನವಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಕಡವು ನಿರೀಕ್ಷಕ ಧನೇಂದ್ರ ಕುಮಾರ್ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಲಾಂಚ್ ಸೇವೆ ಸ್ಥಗಿತಗೊಳಿಸಿ, ಸಾರ್ವಜನಿಕರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ದ್ವೀಪ ಭಾಗದ ಕುದರೂರು, ಚನ್ನಗೊಂಡ, ಎಸ್ ಎಸ್ ಭೋಗ್, ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ಕಾರ್ಗಲ್ ಜೋಗದಿಂದ ಬರುವ ಪ್ರವಾಸಿಗರು ಜೂನ್ 4ರ ವರೆಗೆ ಸಮೀಪದ ಹೊಳೆಬಾಗಿಲು ಕಡವು ಮಾರ್ಗದ 'ಸಿಗಂದೂರು ಲಾಂಚ್' ಸೇವೆ ಬಳಸಲು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.