ADVERTISEMENT

ಮುಂಗಾರಿಗೆ ಮುನ್ನವೇ ತುಂಗಾ ಜಲಾಶಯ ಭರ್ತಿ

​ಪ್ರಜಾವಾಣಿ ವಾರ್ತೆ
Published 14 ಮೇ 2021, 13:03 IST
Last Updated 14 ಮೇ 2021, 13:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶಿವಮೊಗ್ಗ: ಮುಂಗಾರಿಗೆ ಮುನ್ನವೇ ಮಲೆನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತುಂಗಾ ಜಲಾಶಯ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲು ಎಂಜಿನಿಯರ್‌ಗಳು ಸಿದ್ಧರಾಗಿದ್ದಾರೆ.

ಜಲಾಶಯದ ಗರಿಷ್ಠ ಮಟ್ಟ ಸಮುದ್ರಮಟ್ಟದಿಂದ 588.24 ಮೀಟರ್‌ ಇದೆ. ಶುಕ್ರವಾರ ಸಂಜೆಯ ವೇಳೆಗೆ ಜಲಾಶಯದ ಮಟ್ಟ 588.02 ಮೀಟರ್‌ ತಲುಪಿದೆ. ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯದ ಒಳಹರಿವು 417 ಕ್ಯೂಸೆಕ್‌ ಇದ್ದು, ನಿರಂತರವಾಗಿ ಹೆಚ್ಚಾಗುತ್ತಿದೆ.

ಹಾಗಾಗಿ, ಯಾವುದೇ ಸಮಯದಲ್ಲಿ ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಬಹುದು. ಶಿವಮೊಗ್ಗ ನಗರ ಸೇರಿದಂತೆ ನದಿ ಪಾತ್ರದ ಜನರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಆಗುಂಬೆ ಸಂಚಾರ ನಿಷೇಧ:

ಜಿಲ್ಲೆಯಲ್ಲಿ ಮೂರು ದಿನಗಳು ಭಾರಿ ಮಳೆ ಸುರಿಯುವ ಸೂಚನೆ ಇರುವ ಕಾರಣ ಆಗುಂಬೆ ಘಾಟಿ ಪ್ರದೇಶದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚಿಸಿದರು. ನದಿ, ನಾಲೆ, ತಗ್ಗು ಪ್ರದೇಶಗಳಲ್ಲಿ ಸುರಕ್ಷಾತಾ ಕ್ರಮಗಳನ್ನು ಕೈಗೊಂಡಿರುವುದಾಗಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.