ADVERTISEMENT

ಭದ್ರಾ ಜಲಾಶಯ: ನಾಲ್ಕು ದಿನ, 3 ಅಡಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 4:13 IST
Last Updated 5 ಜುಲೈ 2022, 4:13 IST
ಉತ್ತಮ ಮಳೆಯಿಂದಾಗಿ ಹಾಗೂ ಜಲಾಶಯದಿಂದ ನೀರು ಬಿಟ್ಟ ಕಾರಣ ತುಂಗಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನಗರದ ತುಂಗಾ ನದಿ ಸೇತುವೆ ಸೋಮವಾರ ಕಂಡು ಬಂದ ದೃಶ್ಯ. – ಪ್ರಜಾವಾಣಿ ಚಿತ್ರ/ ಶಿವಮೊಗ್ಗ ನಾಗರಾಜ್
ಉತ್ತಮ ಮಳೆಯಿಂದಾಗಿ ಹಾಗೂ ಜಲಾಶಯದಿಂದ ನೀರು ಬಿಟ್ಟ ಕಾರಣ ತುಂಗಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನಗರದ ತುಂಗಾ ನದಿ ಸೇತುವೆ ಸೋಮವಾರ ಕಂಡು ಬಂದ ದೃಶ್ಯ. – ಪ್ರಜಾವಾಣಿ ಚಿತ್ರ/ ಶಿವಮೊಗ್ಗ ನಾಗರಾಜ್   

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ನದಿ ಪಾತ್ರದ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದ್ದು ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ಜುಲೈ ತಿಂಗಳ ಮೊದಲ ನಾಲ್ಕು ದಿನಗಳಲ್ಲಿ ಜಲಾಶಯದಲ್ಲಿ ನೀರಿನ ಪ್ರಮಾಣ ಮೂರು ಅಡಿಯಷ್ಟು ಹೆಚ್ಚಳಗೊಂಡಿದೆ.

ಆರಿದ್ರೆಯ ಆರ್ಭಟದ ಫಲವಾಗಿ ಜುಲೈ 1ರಿಂದ 4ರವರೆಗೆ ಭದ್ರಾ ಜಲಾಶಯಕ್ಕೆ 33,964 ಕ್ಯುಸೆಕ್ ನೀರು ಹರಿದುಬಂದಿದೆ. ಜುಲೈ 1ರಂದು 3,717 ಕ್ಯುಸೆಕ್ ಇದ್ದ ಒಳಹರಿವಿನ ಪ್ರಮಾಣ, ಸೋಮವಾರ 13405 ಕ್ಯುಸೆಕ್‌ಗೆ ಹೆಚ್ಚಳಗೊಂಡಿತ್ತು. ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿ ಇದ್ದು, ಜಲಾಶಯದಲ್ಲಿ ಶುಕ್ರವಾರ 152.6 ಅಡಿ ಇದ್ದ ನೀರಿನ ಪ್ರಮಾಣ ಸೋಮವಾರ 155.7 ಅಡಿಗೆ ಏರಿಕೆಯಾಗಿತ್ತು. ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ನೀರಿನ ಮಟ್ಟ 165 ಅಡಿಗೆ ಹೆಚ್ಚಳವಾಗಬೇಕಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭದ್ರೆ ಮೈದುಂಬುವುದನ್ನು ಕಾಣಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT