ADVERTISEMENT

ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕ: ಶಾಸಕ ಗೋಪಾಲಕೃಷ್ಣ ಬೇಳೂರು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 4:35 IST
Last Updated 3 ಸೆಪ್ಟೆಂಬರ್ 2025, 4:35 IST
<div class="paragraphs"><p>ಸಾಗರದಲ್ಲಿ ಮಂಗಳವಾರ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು</p></div>

ಸಾಗರದಲ್ಲಿ ಮಂಗಳವಾರ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು

   

ಸಾಗರ: ‘ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಿದೆ. ಈ ಪೈಕಿ 3 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಕರ ಕೊರತೆ ನಿವಾರಿಸಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ಇಲ್ಲಿನ ನೆಹರು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಂಗಳವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

‘ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಯಾವತ್ತೂ ಪ್ರಮುಖ ಪಾತ್ರ ವಹಿಸುತ್ತದೆ. ಪೋಷಕರು, ಶಿಕ್ಷಕರು ಮಕ್ಕಳಿಗೆ ಓದಿನ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು’ ಎಂದು ಕಿವಿಮಾತು ಹೇಳಿದರು.

ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಸ್ಥೆ ಸಿಸ್ಟರ್ ಲೆಮೆನ್ಸಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯ ಕೆ.ಆರ್.ಗಣೇಶ್ ಪ್ರಸಾದ್, ಗಣಪತಿ ಮಂಡಗಳಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣ್ಯ, ಸಿಸ್ಟರ್ ಮೆರಿನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.