ADVERTISEMENT

ಕೋಣಂದೂರು: ಇಬ್ಬರಲ್ಲಿ ಕೆ.ಎಫ್.ಡಿ. ಸೋಂಕು ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:43 IST
Last Updated 3 ಫೆಬ್ರುವರಿ 2026, 2:43 IST
<div class="paragraphs"><p>ಮಂಗನ ಕಾಯಿಲೆ</p></div>

ಮಂಗನ ಕಾಯಿಲೆ

   

ಸಾಂದರ್ಭಿಕ ಚಿತ್ರ

ಕೋಣಂದೂರು (ಶಿವಮೊಗ್ಗ): ಸಮೀಪದ ಅಕ್ಲಾಪುರ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಸೋಮವಾರ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ಪತ್ತೆಯಾಗಿದೆ.

ADVERTISEMENT

ಅಕ್ಲಾಪುರದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಚನ್ನಗಿರಿ ಮೂಲದ 50 ವರ್ಷ ವಯಸ್ಸಿನ ಒಬ್ಬ ಮಹಿಳೆ ಹಾಗೂ 40 ವರ್ಷ ವಯಸ್ಸಿನ ಸ್ಥಳೀಯ ಮಹಿಳೆಯೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ. ಇಬ್ಬರಿಗೂ ಜ್ವರ ಕಾಣಿಸಿಕೊಂಡ ಕಾರಣ ರಕ್ತ ಪರೀಕ್ಷೆ ಮಾಡಲಾಗಿತ್ತು. ಆಗ  ಕೆಎಫ್‌ಡಿ ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಈ ಭಾಗದಲ್ಲಿ ಜ್ವರಪೀಡಿತರು ಅಧಿಕ ಸಂಖ್ಯೆಯಲ್ಲಿ ಆಸ್ಪತ್ರೆಗೆ ಬರುತ್ತಿದೆ. ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಅರಿವು ಮೂಡಿಸಲು 6 ಜನರಿರುವ ಆರೋಗ್ಯ ಸಿಬ್ಬಂದಿಯ ತಂಡವನ್ನು ಅಕ್ಲಾಪುರದಲ್ಲಿ ಕಾರ್ಯ ನಿರ್ವಹಿಸಲು ನಿಯೋಜಿಸಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಕೇತ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.