ADVERTISEMENT

ಕಚೇರಿಗಳಿಗೆ ಅನಿರೀಕ್ಷಿತ ಭೇಟಿ: ಉಪ ಲೋಕಾಯುಕ್ತರ ಒಲವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 12:43 IST
Last Updated 9 ಜನವರಿ 2020, 12:43 IST
ಶಿವಮೊಗ್ಗ ಟ್ಯಾಂಕ್‌ಮೊಹಲ್ಲಾದ ಬಾಲಕಿಯರ ವಸತಿನಿಲಯಕ್ಕೆ ಗುರುವಾರ ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ ಭೇಟಿ ನೀಡಿ, ಮಾಹಿತಿ ಪಡೆದರು.
ಶಿವಮೊಗ್ಗ ಟ್ಯಾಂಕ್‌ಮೊಹಲ್ಲಾದ ಬಾಲಕಿಯರ ವಸತಿನಿಲಯಕ್ಕೆ ಗುರುವಾರ ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ ಭೇಟಿ ನೀಡಿ, ಮಾಹಿತಿ ಪಡೆದರು.   

ಶಿವಮೊಗ್ಗ: ಸರ್ಕಾರಿ ಕಚೇರಿಗಳ ಕಾರ್ಯ ವೈಖರಿ ಪರಿಶೀಲಿಸಲು ಮುಂದಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಲಾಗುವುದು ಎಂದು ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ್ ತಿಳಿಸಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಾರ್ವಜನಿಕ ದೂರು ಅರ್ಜಿಗಳ ವಿಚಾರಣೆ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಆದ್ಯತೆ ಮೇರೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು.ಅಧಿಕಾರಿಗಳು ಅಹವಾಲು ಕಾಲಮಿತಿ ಒಳಗೆ ವಿಲೇವಾರಿ ಮಾಡಬೇಕು. ಸರ್ಕಾರದ ಸೌಲಭ್ಯಗಳು ಜನಸಾಮಾನ್ಯರಿಗೆ ದೊರಕಬೇಕು. ಇಲ್ಲದಿದ್ದರೆ ದೂರುಗಳು ಬರುವುದು ಸಹಜ. ಶಿವಮೊಗ್ಗ ಜಿಲ್ಲೆಯ 48 ಪ್ರಕರಣಗಳು ಲೋಕಾಯುಕ್ತದ ಮುಂದಿವೆ.ಶುಕ್ರವಾರ ವಿಚಾರಣೆ ನಡೆಸಲಾಗುವುದು. ಲೋಕಾಯುಕ್ತದಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣ ಇತ್ಯರ್ಥಗೊಳಿಸಲಾಗುವುದು ಎಂದರು.

ADVERTISEMENT

ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಜನರು ಸಾಕಷ್ಟು ಜಾಗೃತರಾಗಿದ್ದಾರೆ. ಹಾಗಾಗಿ, ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯದಲ್ಲಿ ಲೋಪ ಎಸಗಿರುವುದು ದೃಢಪಟ್ಟರೆಕ್ರಮಅನಿವಾರ್ಯ. ಉತ್ತಮ ಆಡಳಿತದಲ್ಲಿ ಶಿವಮೊಗ್ಗ ರಾಜ್ಯಕ್ಕೆ ಮಾದರಿಯಾಗಬೇಕು ಎಂದುಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿಸಿಇಒ ಎಂ.ಎಲ್.ವೈಶಾಲಿ, ಲೋಕಾಯುಕ್ತ ರಿಜಿಸ್ಟ್ರಾರ್ ಸಂತೋಷ್ ಕುಮಾರ್‌ ಉಪಸ್ಥಿತರಿದ್ದರು.

ವಿವಿಧೆಡೆ ಉಪ ಲೋಕಾಯುಕ್ತರ ಭೇಟಿ

ಉಪ ಲೋಕಾಯುಕ್ತರು ಸಭೆಯ ಬಳಿಕ ಗಾಡಿಕೊಪ್ಪದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಟ್ಯಾಂಕ್ ಮೊಹಲ್ಲಾದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಬಾಪೂಜಿ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ಪರಿಶೀಲನೆ ನಡೆಸಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿಯ 5 ಮಕ್ಕಳು ನಿರಂತರಗೈರು ಹಾಜರಾಗಿದ್ದಾರೆ.ಅವರನ್ನು ಮರಳಿ ಶಾಲೆಗೆ ಕರೆ ತರಬೇಕು ಎಂದು ತಾಕೀತು ಮಾಡಿದರು. ಮಕ್ಕಳ ಶಿಕ್ಷಣದಲ್ಲಿಶಿಕ್ಷಕರು, ಪೋಷಕರ ಜವಾಬ್ದಾರಿ ಇದೆ. ಹಾಳಾಗಿರುವ ಶಾಲೆಯ ಮೇಲ್ಘಾವಣಿ ತಕ್ಷಣ ಸರಿಪಡಿಸಬೇಕು ಎಂದು ಸೂಚಿಸಿದರು.

ಟ್ಯಾಂಕ್‌ಮೊಹಲ್ಲಾದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಮೇಲ್ವಿಚಾರಕಿ ಸಯೀದಾ ಬಾನು ಅವರ ಕಾರ್ಯ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಾಲಕಿಯರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ಮೂಡಿಸುವಂತಹ ಚಟುವಟಿಕೆಗಳನ್ನು ವಸತಿ ನಿಲಯದಲ್ಲಿ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.