ADVERTISEMENT

ಶಿವಮೊಗ್ಗ | ಅನಗತ್ಯ ಓಡಾಟ: ಪೊಲೀಸರಿಂದ ದಂಡ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 6:38 IST
Last Updated 10 ಜನವರಿ 2022, 6:38 IST
ವಾರಾಂತ್ಯ ಕರ್ಫ್ಯೂ ಕಾರಣ ಶಿಕಾರಿಪುರ ಪಟ್ಟಣದಲ್ಲಿ ಭಾನುವಾರ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸಿದರು
ವಾರಾಂತ್ಯ ಕರ್ಫ್ಯೂ ಕಾರಣ ಶಿಕಾರಿಪುರ ಪಟ್ಟಣದಲ್ಲಿ ಭಾನುವಾರ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸಿದರು   

ಶಿಕಾರಿಪುರ:ವಾರಾಂತ್ಯ ಕರ್ಫ್ಯೂ ಇದ್ದರೂ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಬಾನುವಾರ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದರು.

ವಾರಾಂತ್ಯವ ಕರ್ಫ್ಯೂ ಕಾರಣ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿಗಳು ಬಂದ್ ಆಗಿದ್ದವು. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪಾರ್ಸೆಲ್ ನೀಡಲಾಯಿತು.

ಬಸ್ ನಿಲ್ದಾಣ ಹಾಗೂ ಪ್ರಮುಖ ರಸ್ತೆಗಳು ಜನರಿಲ್ಲದೇ ಬಿಕೊ ಎನ್ನುತ್ತಿದ್ದವು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಮಾಸ್ಕ್ ಹಾಕದ ಹಾಗೂ ಸಮರ್ಪಕ ದಾಖಲೆ ಇಲ್ಲದ ವಾಹನಗಳ ಸವಾರರಿಗೆ ದಂಡ ವಿಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.