ADVERTISEMENT

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 16:04 IST
Last Updated 18 ಏಪ್ರಿಲ್ 2024, 16:04 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕವು ಹೂಡಿರುವ ದಾವೆಯ ವಿಚಾರಣೆಯನ್ನು ಇಲ್ಲಿನ ಸಿವಿಲ್ ನ್ಯಾಯಾಲಯ ಏಪ್ರಿಲ್ 20ಕ್ಕೆ ಮುಂದೂಡಿದೆ.

ದಾವೆ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಪರ ವಕೀಲರು ನ್ಯಾಯಾಲಯಕ್ಕೆ ಗುರುವಾರ ಸಂಜೆ ಪ್ರತಿ ವಾದ ಪತ್ರ ಸಲ್ಲಿಸಿದರು. ದಾವೆಯನ್ನು ವಜಾ ಮಾಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಹೀಗಾಗಿ ವಿಚಾರಣೆಯನ್ನು ನ್ಯಾಯಾಲಯಕ್ಕೆ ಶನಿವಾರಕ್ಕೆ ಮುಂದೂಡಿತು.

ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಲು ಅವಕಾಶವಿದೆ. ಬೇರೆಯವರು ಬಳಕೆ ಮಾಡಿದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್– 29ರ ಉಲ್ಲಂಘನೆಯಾಗುತ್ತದೆ. ಹೀಗಾಗಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಸಭೆಯ ವೇದಿಕೆಗಳಲ್ಲಿ ನರೇಂದ್ರ ಮೋದಿ ಭಾವಚಿತ್ರ ಮಾತ್ರವಲ್ಲ ಹೆಸರು ಬಳಕೆ ಮಾಡುವುದಕ್ಕೂ ತಡೆಯಾಜ್ಞೆ ನೀಡುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಏಪ್ರಿಲ್‌ 15ರಂದು ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.