ADVERTISEMENT

ಜುಲೈ 2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಫ.ಗು.ಹಳಕಟ್ಟಿ ಅವರ ಜನ್ಮದಿನ

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 16:04 IST
Last Updated 30 ಜೂನ್ 2023, 16:04 IST

ಶಿವಮೊಗ್ಗ: ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಜುಲೈ2 ರಂದು ನಗರದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಕ್ಕೆ ಕಾರ್ಯಕ್ರಮ ನಡೆಯಲಿದೆ. 

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಸ್.ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಅಂದು ಚಿಕ್ಕಮಗಳೂರು ಮೂಲದ ಸಾಹಿತಿ ಬಿ.ತಿಪ್ಪೇರುದ್ರಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.