ADVERTISEMENT

ಶಿವಮೊಗ್ಗ: ಎಲ್ಲೆಡೆ ವೈಕುಂಠ ಏಕಾದಶಿ ಸಡಗರ

ದೇವಾಲಯಗಳಲ್ಲಿ ವಿಶೇಷ ಅಲಂಕಾರ ಪೂಜೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:06 IST
Last Updated 14 ಜನವರಿ 2022, 6:06 IST
ಶಿವಮೊಗ್ಗ ವೆಂಕಟೇಶ್ವರ ನಗರದ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.
ಶಿವಮೊಗ್ಗ ವೆಂಕಟೇಶ್ವರ ನಗರದ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.   

ಶಿವಮೊಗ್ಗ: ನಗರದೆಲ್ಲೆಡೆ ಗುರುವಾರ ವೈಕುಂಠ ಏಕಾದಶಿಯ ಅಂಗವಾಗಿ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.

ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆ ಇದ್ದು, ಜನರು ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಿದರು. ಭಕ್ತರು ಸರತಿಯ ಸಾಲಲ್ಲಿ ನಿಂತು ದೇವರ ದರ್ಶನ ಪಡೆದರು. ಕೋವಿಡ್ ಕಾರಣ ಭಕ್ತರಿಗೆ ನಿಯಮದ ಅಡಿಯಲ್ಲಿಯೇ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.ಪ್ರತಿ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು ಜನರು ಇಲ್ಲದಿದ್ದರೂ ಓಮೈಕ್ರಾನ್ ಆತಂಕದ ನಡುವೆಯೂ ಸಂಭ್ರಮ ತುಂಬಿತ್ತು.

ವೆಂಕಟೇಶ್ವರ ನಗರದ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ವೈಕುಂಠ ದ್ವಾರವನ್ನು ನಿರ್ಮಾಣ ಮಾಡಲಾಗಿತ್ತು. ಪ್ರತಿಬಾರಿಯೂ 25ರಿಂದ 30 ಜನರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಮಾಸ್ಕ್ ಧರಿಸಲು, ಅಂತರ ಕಾಪಾಡುವಂತೆ ದೇವಸ್ಥಾನದ ಆಯೋಜಕರು ಮನವಿ ಮಾಡುತ್ತಿದ್ದುದು ಕಂಡುಬಂತು.

ADVERTISEMENT

ಜಯನಗರದ ಶ್ರೀರಾಮ ಮಂದಿರ, ನವುಲೆಯ ವೆಂಕಟರಮಣ ದೇವಾಲಯ, ಕೋಟೆ ಶ್ರೀರಾಮಾಂಜನೇಯ ದೇವಾಲಯ, ಜಿ.ಎಸ್.ಕೆ.ಎಂ. ರಸ್ತೆಯ ವೆಂಕಟರಮಣ ದೇವಾಲಯ, ಅಶ್ವತ್ಥನಗರ, ದೇವಗಿರಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಸೇರಿ ಹಲವು ದೇವಾಲಯಗಳಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.