ADVERTISEMENT

ವೀರಾಂಜನೇಯ ಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 12:38 IST
Last Updated 6 ಫೆಬ್ರುವರಿ 2019, 12:38 IST
 ಆನಂದಪುರ ಸಮೀಪದ ವೀರಾಂಜನೇಯ ದೇವಸ್ಥಾನದ ಮಹಾರಥೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು
 ಆನಂದಪುರ ಸಮೀಪದ ವೀರಾಂಜನೇಯ ದೇವಸ್ಥಾನದ ಮಹಾರಥೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು   

ಆನಂದಪುರ: ಇಲ್ಲಿನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮಹಾ ರಥೋತ್ಸವ ಬುಧವಾರ ನೆರೆದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಆನಂದಪುರ ಸುತ್ತಮುತ್ತಲಿನ ಹಲವಾರು ಹಳ್ಳಿಗಳಿಂದ ಬಂದ ಸಾವಿರಾರು ಭಕ್ತರು ದೇವರಿಗೆ ಹಣ್ಣು, ಕಾಯಿ, ಕಾಣಿಕೆ ದೇವರಿಗೆ ಸಮರ್ಪಿಸಿ ಪೂಜೆ ಸಲ್ಲಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥ ಸಂಚರಿಸಿತು.

ನಂತರ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಗಂದೂರು ಧರ್ಮದರ್ಶಿ ರಾಮಪ್ಪ, ‘ದೇವರ ಆರಾಧನೆಯಿಂದ ಮಾತ್ರ ಜೀವನದಲ್ಲಿ ಶಾಂತಿ ನೆಮ್ಮದಿ ದೊರಕಲು ಸಾಧ್ಯ. ದೇಹಕ್ಕೆ ದಣಿವಾದರೆ ಹಸುವನ್ನು ನೀಗಿಸಿಕೊಳ್ಳಬಹುದು, ಆದರೆ ಮನಸ್ಸಿನ ಹಸುವು ನೀಗುವುದು ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯಿಂದ ಮಾತ್ರ ಸಾಧ್ಯ’ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ ಸುಧಾಕರ್, ವೀರಾಂಜನೇಯ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಹಾಲಪ್ಪ ಹಾಗೂ ಪ್ರಮುಖರಾದ ಮಮತಾ, ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.