ADVERTISEMENT

ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 4:52 IST
Last Updated 1 ಆಗಸ್ಟ್ 2025, 4:52 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆ ಹೋಗುತ್ತಿದ್ದ ಬಡಾ ದೋಸ್ತ್ ವಾಹನ ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ADVERTISEMENT

ಕುಂದಾಪುರ ತಾಲ್ಲೂಕು ಸಾಲಿಗ್ರಾಮದ ಮೂಲದ ಚಾಲಕ ಗೋಪಾಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕ್ಲೀನರ್ ಪ್ರಭಾಕರ ಗಾಯಗೊಂಡಿದ್ದು ಮಾಸ್ತಿಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.