ADVERTISEMENT

ಕುಪ್ಪಳಿ: ವಿಶ್ವಮಾನವ ದಿನಾಚರಣೆ 29ಕ್ಕೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2022, 5:37 IST
Last Updated 27 ಡಿಸೆಂಬರ್ 2022, 5:37 IST
ಕುವೆಂಪು
ಕುವೆಂಪು   

ತೀರ್ಥಹಳ್ಳಿ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಕುವೆಂಪು ಅವರ 118ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ.29ರ ಗುರುವಾರ ಕುಪ್ಪಳಿಯ ಹೇಮಾಂಗಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತವಾರಿ ಸಚಿವ ಕೆ.ಸಿ. ನಾರಾಯಣ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ, ಗಾಂಧಿ ಚಿಂತಕ ಪ್ರೊ.ಶಿವರಾಜ್ ಪ್ರಧಾನ ಭಾಷಣ ಮಾಡಲಿದ್ದಾರೆ.

ಗೃಹಸಚಿವ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಪ್ರತಿಷ್ಠಾನದ ಹಂಗಾಮಿ ಅಧ್ಯಕ್ಷ ಡಾ.ಬಿ.ಎಲ್.‌ ಶಂಕರ್‌, ಕುವೆಂಪು ವಿ.ವಿ. ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಉಪಸ್ಥಿತರಿರಲಿದ್ದಾರೆ. ತಮಿಳು ಸಾಹಿತಿ ವಿ.ಅಣ್ಣಾಮಲೈ ಅವರಿಗೆ 2022ರ ಕುವೆಂಪು ರಾಷ್ಟ್ರೀಯ ಪುರಸ್ಕಾರವನ್ನು ಇದೇ ವೇಳೆ ಪ್ರದಾನ ಮಾಡಲಾಗುವುದು.

ADVERTISEMENT

ಡಿ.27ರಿಂದ 29ರ ವರೆಗೆ ಕರ್ನಾಟಕ ಲೇಖಕಿಯರ ಸಂಘದಿಂದ ಕುವೆಂಪು ಸಾಹಿತ್ಯ ಅಧ್ಯಯನ ಕಮ್ಮಟ ನಡೆಯಲಿದೆ. ಡಿ.29ರ ಮಧ್ಯಾಹ್ನ ಸಮಾರೋಪ ಮತ್ತು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.